ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಏಮ್‌ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕೃತ ಹೇಳಿಕೆ ತಿಳಿಸಿದೆ.
ವಾಜಪೇಯಿ ಅವರು ನಾವು ನೀಡುತ್ತಿರುವ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಯಾವುದೇ ರೀತಿಯ ತೊಂದರೆಯಿಲ್ಲ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುತ್ತದೆ ಎಂದು ಹೇಳಿಕೆ ತಿಳಿಸಿದೆ.
ಅಟಲ್ ಜೀ ಆರೋಗ್ಯ ಕುರಿತಾಗಿ ನಿನ್ನೆ ಹೇಳಿಕೆ ನೀಡಿದ್ದ ಆಸ್ಪತ್ರೆಯ ಅಧಿಕಾರಿಗಳು, ನಿಯಮಿತ ತಪಾಸಣೆಗಾಗಿ ವಾಜಪೇಯಿ ಅವರನ್ನು ಅಡ್ಮಿಟ್ ಮಾಡಿಕೊಳ್ಳಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದರು.

















