ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಇಬ್ಬರೂ ಐಸೋಲೇಶನ್ ಆಗಿದ್ದಾರೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ದೇವೇಗೌಡರು, ನನಗೆ ಹಾಗೂ ನನ್ನ ಧರ್ಮಪತ್ನಿಗೆ ಕೊರೋನಾ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಕುಟುಂಬಸ್ಥರೊಂದಿಗೆ ಐಸೋಲೇಶನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಭೀತರಾಗದಂತೆ ನಾನು ವಿನಂತಿಸುತ್ತೇನೆ ಎಂದಿದ್ದಾರೆ.
My wife Chennamma and I have tested positive for COVID-19. We are self-isolating along with other family members.
I request all those who came in contact with us over the last few days to get themselves tested. I request party workers and well-wishers not to panic.— H D Devegowda (@H_D_Devegowda) March 31, 2021
ಶೀಘ್ರ ಗುಣಮುಖರಾಗಿ: ಯಡಿಯೂರಪ್ಪ
ಇನ್ನು, ದೇವೇಗೌಡರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೇಗೌಡರು ಮತ್ತು ಅವರ ಶ್ರೀ ಮತಿ ಚೆನ್ನಮ್ಮನವರು ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ, ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೇಗೌಡರು ಮತ್ತು ಅವರ ಶ್ರೀಮತಿ ಚೆನ್ನಮ್ಮನವರು ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ, ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ. https://t.co/YZ7Januj0u
— B.S. Yediyurappa (@BSYBJP) March 31, 2021
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post