ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಿಲಾನ್ಯಾಸ ನಡೆಸಿದ ಹಿನ್ನೆಲೆಯಲ್ಲಿ ತಾಲೂಕಿನ ಕೂಡ್ಲಿಗೆರೆಯಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಶ್ರೀ ರಾಮ ದೇವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದ ಪ್ರಮುಖರು ನಾಗರಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರಾದ ಕೂಡ್ಲಿಗೆರೆ ಹಾಲೇಶ್,ಮಂಡಲ ಸಮಿತಿ ಸದಸ್ಯ ಕುಮಾರ್, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ರುದ್ರೇಶ.ಆರ್.ಎನ್, ಶಕ್ತಿ ಕೇಂದ್ರ ಪ್ರಮುಖ್ ಪ್ರದೀಪ್, ಬೂತ್ ಅಧ್ಯಕ್ಷರಾದ ಚೇತನ್ ಕುಮಾರ್, ಮಂಜುನಾಥ್, ತಿರುಮಲೈ, ಕಾರ್ಯಕರ್ತರಾದ ರುದ್ರಮುನಿ, ಬಸವರಾಜ್, ಷಣ್ಮುಖ, ರವಿಶಂಕರ್, ಎಸ್.ಸಿ. ಮೋರ್ಚಾ ಕಾರ್ಯದರ್ಶಿ ಮಾಲತೇಶ್ ಹಾಗೂ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093














