Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಚಿತ್ರದುರ್ಗ-ಶಿವಮೊಗ್ಗ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ

ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ಸಚಿವ ಪಾಟೀಲ್ ಸೂಚನೆ

September 5, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ವಿಧಾನಸಭಾ ವ್ಯಾಪ್ತಿಯಲ್ಲಿ ಇಂದು ಶಂಕುಸ್ಥಾಪನೆಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಇಂದಿನಿಂದಲೇ ಆರಂಭಿಸಿ ಕಾಲ ಮಿತಿಯೊಳಗೆ ಅತ್ಯುತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳಲು ಲೋಕೋಪಯೋಗಿ ಇಲಾಖೆಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ಭರವಸೆ ನೀಡಿದರು.

ಇಂದು ನಗರದ ಅರಕೇಶ್ವರ ದೇವಸ್ಥಾನದ ಬಳಿ ರೂ.516.96 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 13 ರ ಕಿ.ಮೀ 422 ರಿಂದ 523.60 (ಚಿತ್ರದುರ್ಗದಿಂದ ಶಿವಮೊಗ್ಗ) ವರೆಗಿನ ರಸ್ತೆ ಮೇಲ್ದರ್ಜೆಗೇರಿಸುವ ಬಾಕಿ ಉಳಿದಿರುವ ಕಾಮಗಾರಿ, ರೂ. 43.90 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 13 ರ ಕಿ.ಮೀ 525 ರಲ್ಲಿ ರೈಲ್ವೇ ಸರಪಳಿ 60/950 ರ ಶಿವಮೊಗ್ಗ ನಗರದ ವಿದ್ಯಾನಗರ ಬಳಿ ವೃತ್ತಾಕಾರದ ರೈಲ್ವೇ ಮೇಲ್ಸುತುವೆ ನಿರ್ಮಾಣ ಹಾಗೂ ರೂ.20.12 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 206 ರ ಕಿ.ಮೀ.207.80 ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ತುಂಗಾ ನದಿಗೆ ಮತ್ತೊಂದು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.


ಶಿವಮೊಗ್ಗ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ, ಉಸ್ತುವಾರಿ ಸಚಿವರು ಮತ್ತು ಸಂಸದರ ಸಹಯೋಗದಲ್ಲಿ ಅತ್ಯುತ್ತಮ ಅಭಿವೃದ್ದಿ ಕೆಲಸಗಳು ಆಗಿವೆ. ಬಹುತೇಕ ಎಲ್ಲ ಕೆಲಸಗಳು ಆಗಿವೆ. ಏನಾದರೂ ಬಾಕಿ ಇದ್ದರೆ ಅದಕ್ಕೆ ನಮ್ಮ ಇಲಾಖೆ ಸಹಕಾರ ಸಂಪೂರ್ಣ ಇದೆ ಎಂದರು.

ಗ್ರಾಮೀಣಾಭಿವೃದ್ದಿ ಮತ್ತು ಲೋಕೋಪಯೋಗಿ ಇಲಾಖೆಗಳ ಸಹಯೋಗದಲ್ಲಿ ಉತ್ತಮ ಕೆಲಸಗಳು ಆದಲ್ಲಿ ಸಾರ್ವಜನಿಕರಿಗೆ ಎಲ್ಲ ರೀತಿಯಲ್ಲಿ ಅನುಕೂಲವಾಗಲಿದೆ. ಇಂದು ಶಂಕುಸ್ಥಾಪನೆಗೊಂಡಿರುವ ಕಾಮಗಾರಿಗಳು ಯಶಸ್ವಿಯಾಗಿ ನೆರವೇರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಮಾನ ನಿಲ್ದಾಣದ ಕೆಲಸವನ್ನು ಸಹ ಗುಣಮಟ್ಟದೊಂದಿಗೆ ಕಾಕಲಮಿತಿಯಲ್ಲಿ ಪೂರ್ಣಗೊಳಿಸಲು ತಿಳಿಸಿದ್ದೇನೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 13 ಕಿ.ಮೀ 422 ರಿಂದ 523.60(ಚಿತ್ರದುರ್ಗದಿಂದ ಶಿವಮೊಗ್ಗ) ವರೆಗಿನ ರಸ್ತೆ ಮೇಲ್ದರ್ಜೆಗೇರಿಸುವ ಕಾಮಗಾರಿಗೆ 2014 ರಲ್ಲೇ ಮಂಜೂರಾತಿ ದೊರೆತಿದ್ದು, ಚನ್ನಗಿರಿವರೆಗೆ ಕಾಮಗಾರಿ ನಡೆದು ರೂ.100 ಕೋಟಿ ಕಾಮಗಾರಿ ಬಾಕಿ ಇತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಕೇಂದ್ರದ ನಿತಿನ್ ಗಡ್ಕರಿಯವನ್ನು ಭೇಟಿ ಮಾಡಿ ಈ ಕಾಮಗಾರಿಗೆ ರೂ.400 ಕೋಟಿ ಹೆಚ್ಚುವರಿ ಅನುದಾನ ತಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.ಪ್ರಸ್ತುತ ಜಿಲ್ಲೆಯಿಂದ 36 ರೈಲ್ವೆ ಓಡಾಟ ಇದ್ದು 8500 ಜನರು ಪ್ರಯಾಣ ಮಾಡುತ್ತಿದ್ದಾರೆ. ಜನರ ಅನುಕೂಲಕ್ಕಾಗಿ ಇದೀಗ ರೂ.43.90 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 13 ರ ಕಿ.ಮೀ 525 ರಲ್ಲಿ ರೈಲ್ವೇ ಸರಪಳಿ 60/950 ರ ಶಿವಮೊಗ್ಗ ನಗರದ ವಿದ್ಯಾನಗರ ಬಳಿ ವೃತ್ತಾಕಾರದ ರೈಲ್ವೇ ಮೇಲ್ಸುತುವೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಬೈಪಾಸ್ ರಸ್ತೆಯಲ್ಲಿ ತುಂಗಾ ನದಿಗೆ ಮತ್ತೊಂದು ಸೇತುವೆ ಬೇಕಾದ ಅವಶ್ಯಕತೆ ಮನಗಂಡು ರೂ.20.12 ಕೋಟಿಯಲ್ಲಿ ಮತ್ತೊಂದು ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ತಮ್ಮ ಅವಧಿಯ ಇಲ್ಲಿಯವೆಗೆ ರೂ.8 ಸಾವಿರ ಕೋಟಿ ಅನುದಾನ ತಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಉತ್ತಮ ಅಭಿವೃದ್ದಿ ಕೆಲಸಗಳು ಆಗುತ್ತಿವೆ ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಜಿಲ್ಲೆಯ ರೂ.8 ಸಾವಿರ ಕೋಟಿ ಅನುದಾನ ತಂದು ಅಭಿವೃದ್ದಿ ಕೆಲಸಗಳನ್ನು ಕಾರ್ಯಗತಗೊಳಿಸುತ್ತಿರುವ ಸಂಸದರಿಗೆ ಅಭಿನಂದನೆಗಳು. ಲೋಕೋಪಯೋಗಿ ಸಚಿವರು ನಗರದಲ್ಲಿ ಆರಂಭಿಸಲಾಗಿರುವ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸುವವರೆಗೆ ನಮಗೆ ನೆರವು ನೀಡಬೇಕೆಂದು ಆಗ್ರಹಿಸಿದರು. ವಿಮಾನ ನಿಲ್ದಾಣದಿಂದ ಜಿಲ್ಲೆಯಲ್ಲಿ ಉದ್ಯೋಗಾವಕಾಶ, ಕೈಗಾರಿಕಾ ಕ್ಷೇತ್ರ ಬೆಳೆಯಲಿದ್ದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಸಿಗಂಧೂರು ಕೇಬಲ್ ಬ್ರಿಡ್ಜ್ ಮತ್ತು ವಿದ್ಯಾನಗರ ವೃತ್ತಾಕಾರದ ಮೇಲ್ಸೇತುವೆ ಪಿಪಿಟಿ ಪ್ರದರ್ಶನ ಬಿತ್ತರಿಸಲಾಯಿತು.

ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಕ್ಷಮೆ ಕೋರಿದ ಸಚಿವ-ಸಂಸದರು: ಕಾರ್ಯಕ್ರಮಕ್ಕೂ ಮುನ್ನ ವಿಧಾನ ಪರಿಷತ್ ಶಾಸಕ ರ್ಆ.ಪ್ರಸನ್ನ ಕುಮಾರ್ರನ್ನು ಶಿಷ್ಟಾಚಾರದಂತೆ ಆಹ್ವಾನಿಸಿಲ್ಲ ಎಂದು ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿದರು. ವೇದಿಕೆಯಲ್ಲಿ ಸಚಿವರು ಮತ್ತು ಸಂಸದರು ಈ ಬಗ್ಗೆ ಕ್ಷಮೆ ಕೋರಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಆರ್. ಪ್ರಸನ್ನಕುಮಾರ್, ಆರ್ಯ ವೈಶ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಮಹಾನಗಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ, ಪಾಲಿಕೆ ಸದಸ್ಯೆ ಯಮನಾ ರಂಗನಾಥ್, ಪಾಲಿಕೆ ಸದಸ್ಯರು, ಪದಾಧಿಕಾರಿಗಳು, ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B Y RaghavendraChitradurgacircular overpassK S EshwarappaKannada News WebsiteLatest News KannadaNational HighwayShimogaShivamoggaShivamogga Newsಚನ್ನಗಿರಿಚಿತ್ರದುರ್ಗಬಿ.ವೈ. ರಾಘವೇಂದ್ರರಾಷ್ಟ್ರೀಯ ಹೆದ್ದಾರಿವೃತ್ತಾಕಾರದ ಮೇಲ್ಸೇತುವೆಶಿವಮೊಗ್ಗಹೆದ್ದಾರಿ ಕಾಮಗಾರಿ
Previous Post

ಶಿವಮೊಗ್ಗ: ಈಜಲು ತೆರಳಿದ್ದ ಬಾಲಕ ಹೊಂಡದಲ್ಲಿ ಮುಳುಗಿ ಸಾವು

Next Post

ಸಾಗರ: ಇಂದಿನಿಂದ ಪಪೂ ಕಾಲೇಜು ಆರಂಭ ಹಿನ್ನೆಲೆ ಶಾಸಕರಿಂದ ವಿದ್ಯಾರ್ಥಿಗಳಿಗೆ ಸ್ವಾಗತ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಗರ: ಇಂದಿನಿಂದ ಪಪೂ ಕಾಲೇಜು ಆರಂಭ ಹಿನ್ನೆಲೆ ಶಾಸಕರಿಂದ ವಿದ್ಯಾರ್ಥಿಗಳಿಗೆ ಸ್ವಾಗತ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!