ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಲ್ಕು ದಿನ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜು.6 ರಿಂದ 9 ರವರೆಗೂ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಲಕ್ಯಾ, ಅಂಬಳೆ ಹೋಬಳಿ ಶಾಲೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post