ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನಾಲ್ಕು ರಾಜ್ಯಗಳ ಚುನಾವಣಾ ಮತ ಎಣಿಕೆ ನಡೆದಿದ್ದು, ರಾಜಸ್ಥಾನ #Rajastan ಹಾಗೂ ಮಧ್ಯಪ್ರದೇಶದಲ್ಲಿ #MadhyaPradesh ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ.
ಬೆಳಗ್ಗೆ 10 ಗಂಟೆ ವೇಳೆಗೆ ಎರಡೂ ರಾಜ್ಯಗಳಲ್ಲಿ ಬಿಜೆಪಿ #BJP ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಇದೇ ರೀತಿ ಮುಂದುವರೆದರೆ ಕಮಲ ಪಕ್ಷ ಎರಡೂ ಕಡೆ ಅಧಿಕಾರ ಹಿಡಿಯುವುದು ನಿಶ್ಚಿತವಾಗಿದೆ.
10.15ರ ವೇಳೆಗೆ 199 ವಿಧಾನಸಭಾ ಕ್ಷೇತ್ರಗಳಿರುವ ರಾಜಸ್ಥಾನದಲ್ಲಿ ಬಿಜೆಪಿ 107, ಕಾಂಗ್ರೆಸ್ 76 ಹಾಗೂ 16 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇನ್ನು, 313 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ಬಿಜೆಪಿ 155, ಕಾಂಗ್ರೆಸ್ 72 ಹಾಗೂ 3 ಕಡೆಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post