ಕಲ್ಪ ಮೀಡಿಯಾ ಹೌಸ್ | ಗದಗ |
ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಓವರ್ ಸ್ಪೀಡ್‌ನಲ್ಲಿ #Over Speed ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.
ಹಾವೇರಿಯಿಂದ ಕೊಪ್ಪಳಕ್ಕೆ ಹೊರಟಿದ್ದ ವೇಳೆ ಘಟನೆ ಸಂಭವಿಸಿದ್ದು, ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ದ್ಯಾಮನಕೊಪ್ಪ ನಿವಾಸಿ ಗಣೇಶ ಸೋಮಪ್ಪ ನ್ಯಾರಲಘಂಟಿ (36) ಮೃತ ಯುವಕ ಎಂದು ಗುರುತಿಸಲಾಗಿದೆ.
ಬೈಕ್‌ನಲ್ಲಿ ಹಿಂದೆ ಕೂತಿದ್ದ ಓರ್ವ ಮಹಿಳೆ, ಓರ್ವ ವೃದ್ಧ ಹಾಗೂ 4 ವರ್ಷದ ಮಗು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿಯಾದ ವೇಗವೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಬೈಕ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post