ಕಲ್ಪ ಮೀಡಿಯಾ ಹೌಸ್ | ಗದಗ |
ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ 83 ಮಂದಿ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ.
ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಸ್ಥಳದಿಂದಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿಡಿಯೋ ಕಳುಹಿಸಿದ್ದು, ರಕ್ಷಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ಥಳದಲ್ಲಿ 1,000ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು, ಈ ಪೈಕಿ 83 ಮಂದಿ ಕರ್ನಾಟಕದವರಾಗಿದ್ದಾರೆ ಹಾಗೂ ಈ ಪೈಕಿ 23 ಮಂದಿ ಯಾತ್ರಾರ್ಥಿಗಳು ಗದಗ ಜಿಲ್ಲೆಯವರು ಎಂದು ಹೇಳಲಾಗುತ್ತಿದೆ. ಇವರೆಲ್ಲರೂ ಅಮರನಾಥದ ಪಂಚತಾರ್ನಿ ಮಿಲಿಟರಿ ಬೇಸ್ ಕ್ಯಾಂಪ್‌ನಲ್ಲಿ ಆಶ್ರಯ ಪಡೆದಿದ್ದಾರೆಂದು ತಿಳಿದುಬಂದಿದೆ.
Also read: ಜಮ್ಮು – ಕಾಶ್ಮೀರದಲ್ಲಿ ಮಳೆ ಅವಾಂತರ: ಇಬ್ಬರು ಸೈನಿಕರು ನೀರು ಪಾಲು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post