ಕಲ್ಪ ಮೀಡಿಯಾ ಹೌಸ್ | ಗದಗ |
ನಟ ರಾಕಿಂಗ್ ಸ್ಟಾರ್ ಯಶ್ Rocking Star Yash ಜನ್ಮದಿನಕ್ಕಾಗಿ ಕಟೌಟ್ ಕಟ್ಟುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಸೂರಣಗಿಯ ಅಂಬೇಡ್ಕರ್ ಕಾಲೋನಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ.
ಇಂದು ಯಶ್ ಜನ್ಮದಿನದ ಅಂಗವಾಗಿ ಗ್ರಾಮಸ್ಥರಿಗೆ ಸರ್ಪ್ರೈಸ್ ನೀಡಬೇಕು ಎಂಬ ಉದ್ದೇಶದಿಂದ ರಾತ್ರಿ ಗ್ರಾಮದ ಬೀದಿಗಳಲ್ಲಿ ಕಟೌಟ್ ಹಾಕಲು ಉದ್ದೇಶಿಸಿದ್ದರು.
Also read: ಬಲ್ಕಿಷ್ ಬಾನು ಅತ್ಯಾಚಾರ ಕೇಸ್: 11 ಆರೋಪಿಗಳ ಕ್ಷಮಾದಾನ ರದ್ದು
ಹೀಗೆ ಸುಮಾರು 25 ಅಡಿ ಎತ್ತರದ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಯುವಕರು ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಮೂರು ಯುವಕರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ಒಂದೇ ಕಡೆಯಲ್ಲಿ ಇಂದು ಮುಂಜಾನೆ ನಡೆಸಲಾಗಿದೆ.
ಇಡಿಯ ಗ್ರಾಮದಲ್ಲಿ ಶೋಕ ಸಾಗರದಲ್ಲಿ ಮುಳುಗಿದ್ದು, ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಾಸಕರು ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ನಟ ಯಶ್ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು ಎಂದು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















