ಕಲ್ಪ ಮೀಡಿಯಾ ಹೌಸ್ | ಗಾಂಧಿನಗರ |
ಇಡಿಯ ದೇಶದಲ್ಲೇ ಭಾರೀ ಕುತೂಹಲ ಕೆರಳಿಸಿದ್ದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 157 ಸ್ಥಾನಗಳನ್ನು ಗಳಿಸುವ ಮೂಲಕ ಐತಿಹಾಸಿಕ ವಿಜಯ ದಾಖಲಿಸಿದ್ದು, ಕಮಲ ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಬಿಜೆಪಿ 157 ಸ್ಥಾನಗಳನ್ನು ಗಳಿಸುವ ಮೂಲಕ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದ್ದರೆ, ಕಾಂಗ್ರೆಸ್ 16, ಎಎಪಿ 6 ಹಾಗೂ ಪಕ್ಷೇತರರು 4 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.
ಇನ್ನು, ಭರ್ಜರಿ ಜಯ ಗಳಿಸಿದ ಸಂಭ್ರಮದ ಬೆನ್ನಲ್ಲೇ ಡಿ.12ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.
ವರದಿಯಂತೆ, ಡಿ.12ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ Bhupendra Patel ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, PM Narendra Modi ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಳೆದ ವರ್ಷ ಸೆಪ್ಟೆಂರ್ಬ 12ರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್, ಎರಡನೆಯ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post