ಕಲ್ಪ ಮೀಡಿಯಾ ಹೌಸ್ | ಗಾಂಧಿನಗರ |
ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ PM Narendra Modi ಗಾಂಧಿನಗರಕ್ಕೆ ಆಗಮಿಸಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ Vande Bharath Express Train ಚಾಲನೆ ನೀಡಿದ್ದಾರೆ. ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಹಮ್ಮದಾಬಾದ್‌ಗೆ ಪ್ರಯಾಣ ಮಾಡಿದ್ದಾರೆ.
PM @narendramodi is on board the Vande Bharat Express from Gandhinagar to Ahmedabad. People from different walks of life, including those from the Railways family, women entrepreneurs and youngsters are his co-passengers on this journey. pic.twitter.com/DzwMq5NSXr
— PMO India (@PMOIndia) September 30, 2022
ಗಾಂಧಿನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ರೈಲ್ವೇ ಸಚಿವ ಅಶ್ವಿನ್ ವೈಷ್ಣವ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಹಾಜರಿದ್ದರು. ಮೋದಿ ಆಗಮಿಸುತ್ತಿದ್ದಂತೆ ಮೋದಿ ಮೋದಿ ಘೋಷಣೆಗಳು ಮೊಳಗಿತ್ತು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚಾಲನೆ ಮಾಡುತ್ತಿದ್ದಂತೆ ವಂದೇ ಭಾರತ್ ಘೋಷಣೆ ಮೊಳಗಿತು.

Also read: ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಿದರೆ ಪರ್ಮಿಟ್ ರದ್ದು: ಸಚಿವ ಶ್ರೀರಾಮುಲು ಎಚ್ಚರಿಕೆ
ಗಾಂಧಿನಗರದಿಂದ ರೈಲಿನಲ್ಲಿ ಪ್ರಯಾಣಿಸಿದ ಮೋದಿ ಅಹಮ್ಮದಾಬಾದ್‍ಗೆ ಬಂದಿಳಿಯಲಿದ್ದಾರೆ. ಇಲ್ಲಿ ಮೆಟ್ರೋ ರೈಲು ಯೋಜನೆ ಉದ್ಘಾಟಿಸಲಿದ್ದಾರೆ. ಅಹಮ್ಮದಾಬಾದ್‌ನ ಕಾಲುಪುರದ ರೈಲು ನಿಲ್ದಾಣದಲ್ಲಿ ಮೋದಿ ಇಳಿಯಲಿದ್ದಾರೆ. ಇಲ್ಲಿ ಮೊದಲ ಹಂತದ ಮೆಟ್ರೋ ರೈಲು ಯೋಜನೆ ಉದ್ಘಾಟನೆ ಮಾಡಲಿದ್ದಾರೆ. ಈ ಯೋಜನೆ 12,925 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಕುರಿತು ಮಾಹಿತಿ ಪಡೆದ ಮೋದಿ ಅದೇ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ.





























Discussion about this post