ನವದೆಹಲಿ: ತಮ್ಮ ವಿರುದ್ಧದ ನಿರಂತರವಾದ ಆರೋಪಗಳಿಗೆ ಮೌನವಾಗಿದ್ದ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ಕಾಂಗ್ರೆಸ್ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.
ರಾಜೀವ್ ಗಾಂಧಿ ಅಧಿಕಾರದಲ್ಲಿದ್ದಾಗ ಐಎನ್’ಎಸ್ ವಿರಾಟ್ ಯುದ್ಧ ನೌಕೆಯನ್ನು ರಜಾದಿನಗಳನ್ನು ಕಳೆಯಲು ತಮ್ಮ ಪರ್ಸನಲ್ ಟ್ಯಾಕ್ಸಿಯಂತೆ ಬಳಸಿಕೊಳ್ಳುತ್ತಿದ್ದರು ಎಂದು ಕಟುಟೀಕೆ ಮಾಡಿದ್ದಾರೆ.
ರಜಾ ದಿನಗಳಲ್ಲಿ ರಾಜೀವ್ ಗಾಂಧಿ ಅದನ್ನು ಫ್ಯಾಮಿಲಿ ಟ್ರಿಪ್’ಗೆ ಬಳಸುತ್ತಿದ್ದರು ಎಂದಿದ್ದಾರೆ. ಮೋದಿಯವರ ಈ ಮಾತು ರಾಷ್ಟ್ರ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದೆ.
ಇನ್ನು, ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂ.1 ಎಂಬ ಹಣೆ ಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಅವರೇ 1980 ರಲ್ಲಿ ಪ್ರಧಾನಿಯಾಗಿದ್ದ ಕಾಲದಲ್ಲಿ ಬೋಪೋರ್ಸ್ ಹಗರಣ ನಡೆದಿತ್ತು, ಸೈನ್ಯಕ್ಕೆ ರಕ್ಷಣಾ ಸಾಮಾಗ್ರಿಗಳನ್ನು ಪೂರೈಸುವ ಸ್ವೀಡೀಶ್ ಮೂಲದ ಬೋಪೋರ್ಸ್ ಕಂಪನಿಯಿಂದ ರಾಜೀವ್ ಗಾಂಧಿ ದೊಡ್ಡ ಮೊತ್ತದ ಹಣವನ್ನು ಕಮಿಷನ್ ರೂಪದಲ್ಲಿ ಪಡೆದಿದ್ದರು. ಈ ಮೂಲಕ ನಂ.1 ಭ್ರಷ್ಟಾಚಾರಿ ಎಂಬ ಹಣೆ ಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಗಿತ್ತು ಎಂದಿದ್ದಾರೆ.
Discussion about this post