ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ #GaneshaChaturthi ಆಚರಣೆಯ ರಜೆ ಕುರಿತಾಗಿದ್ದ ಗೊಂದಲಕ್ಕೆ ತೆರೆ ಎಳೆದಿರುವ ಸರ್ಕಾರ ಸೆ.19ರಂದು ಸರ್ಕಾರಿ ರಜೆ #GovernmentHoliday ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ #DakshinaKannada ಜಿಲ್ಲೆಯಲ್ಲಿ ಸೆ.18ರ ಬದಲಾಗಿ ಸೆ.19ರಂದು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬಕ್ಕಾಗಿ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಒತ್ತಡ ಹಾಕಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post