ಭದ್ರಾವತಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಪ್ರತಿಷ್ಠಾಪಿಸಲಾಗಿರುವ ಗಣಪತಿಗಳನ್ನು ಈಗಾಗಲೇ ವಿಸರ್ಜಿಸಲಾಗಿದ್ದು, ಇನ್ನು ಪ್ರಮುಖ ಹಾಗೂ ಪ್ರತಿಷ್ಠಿತ ಗಣಪತಿಗಳ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ನಡೆಸಲಾಯಿತು.
ಹೊಸಮನೆಯಿಂದ ಆರಂಭವಾದ ಪಥಸಂಚಲನ ಹೊಸಮನೆ ಮುಖ್ಯರಸ್ತೆ, ಹಳೆ ಸಂತೆ ಮೈದಾನ ರಸ್ತೆ, ಗಾಂಧಿ ಸರ್ಕಲ್, ಮಾಧವಾಚಾರ್ ಸರ್ಕಲ್, ಹಾಲಪ್ಪ ಸರ್ಕಲ್, ಜಯಶ್ರೀ ಸರ್ಕಲ್‌ಗಳನ್ನು ಸಂಚರಿಸಿ, ಜನರಲ್ಲಿ ಜಾಗೃತಿ ಮೂಡಿಸಿತು.
ಪಥಸಂಚಲನದಲ್ಲಿ ಇಲಾಖೆಯ ಉನ್ನತಾಧಿಕಾರಿಗಳು, ರ್ಯಾಪಿಡ್ ಆಕ್ಷನ್ ಫೋರ್ಸ್, ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆ, ಭದ್ರತೆಗಾಗಿ ನಿಯೋಜಿಸುವ ವಜ್ರ ವಾಹನ ಸೇರಿದಂತೆ ನೂರಾರು ಭದ್ರತಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ನಗರದಲ್ಲಿ ಈ ಭಾರಿ ಗಣೇಶೋತ್ಸವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿ, ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಪಥಸಂಚಲನದ ಮೂಲಕ ಜಾಗೃತಿ ಮೂಡಿಸಲಾಯಿತು.
Discussion about this post