ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಗಾಂಜಾ #Ganja ಮಾರಾಟ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ #Sulia ಠಾಣಾ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 328/2016, ಕಲಂ 8(c) ಹಾಗೂ 20(b) #NDPSAct ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ಮತ್ತು LPC No: 11/2024 ಸಂಬಂಧವಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಪರಾರಿಯಾಗಿದ್ದ ನಸೀಮ್ ಎಂಬ ಆರೋಪಿಯನ್ನು ಉತ್ತರ ಪ್ರದೇಶದ ಖಾಜಿಪುರದಲ್ಲಿ ಗುರುತಿಸಿ ಬಂಧಿಸಲಾಗಿದೆ.
ಮಾರ್ಚ್ 20, 2026ರಂದು ನಡೆದ ಕಾರ್ಯಾಚರಣೆಯಲ್ಲಿ, ಹೆಡ್ ಕಾನ್ಸ್ಟೇಬಲ್ ರಮೇಶ್ ಎಲ್ (HC 359), ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ್ ಡಿ (HC 368) ಮತ್ತು ಪೊಲೀಸ್ ಕಾನ್ಸ್ಟೇಬಲ್ ವಿಖ್ಯಾತ್ ಜೆ ಗೌಡ (PC 629) ಅವರನ್ನೊಳಗೊಂಡ ತಂಡವು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದೆ.
ಬಂಧಿತನನ್ನು ಬಳಿಕ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















