ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ವಿದ್ಯಾರ್ಥಿಗಳ ಕಲಿಕಾಸಕ್ತಿಗೆ ಅನುಗುಣವಾಗಿ ಸೂಕ್ತ ವಾತಾವರಣವನ್ನು ನಿರ್ಮಿಸಿ ಉಜ್ವಲ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲಿದೆ ಎಂದು ಬೆಂಗಳೂರಿನ ಜೆಎನ್’ವಿ ಕಾಲೇಜಿನ ಪ್ರಾಂಶುಪಾಲ ಎಂ. ಚಕ್ರವರ್ತಿ ತಿಳಿಸಿದರು.
ತಾಲೂಕಿನ ಅಲೀಪುರದಲ್ಲಿನ ನೊಬಲ್ ಶಾಲೆಯಲ್ಲಿ ಆಯೋಜಿಸಿದ್ದ 12 ನೆಯ ವರ್ಷದ ’ಗ್ರಾಜುಯೇಷನ್ ಡೇ’ ನಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಶಾಲಾ ಶಿಕ್ಷಣವನ್ನು ಪಡೆದು ಅಂಕಪಟ್ಟಿಯಲ್ಲಿ ಅಂಕಗಳ ಸರಮಾಲೆಯನು ಹೊಂದಿದರೆ ಸಾಲದು. ಅದಕ್ಕೆ ಸರಿ ಹೊಂದುವ ರೀತಿಯಲ್ಲಿ ಸಮಾಜದಲ್ಲಿ ಇತರರಿಗೆ ಮಾದರಿಯಾಗಿ ಬದುಕುವ ಸ್ಥೈರ್ಯ ಬೆಳೆಸಿಕೊಳ್ಳಬೇಕಿದೆ. ಇದರಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಾಗುವುದಲ್ಲದೆ ರಾಷ್ಟ್ರದ ಏಳಿಗೆಗೆ ಸಹಕಾರಿಯಾಗಲಿದೆ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಯ್ಯದ್ ಮೆಹಮದೂಲ್ ಹಸನ್ ಮಾತನಾಡಿ, ಶಾಲೆಯಲ್ಲಿ ವ್ಯಾಸಂಗ ಮಾಡುವ ವೇಳೆ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದ ಬಗ್ಗೆ ಅರಿವಿಲ್ಲದಿರಬಹುದು. ಆದರೆ ಒಂದು ನಿರ್ಧಿಷ್ಟ ಗುರಿಯನ್ನಿರಿಸಿಕೊಂಡು ಅದರತ್ತ ಸಾಗುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕಾಗಿದೆ. ಅದನ್ನು ಸಾಧಿಸಲು ಬೇಕಾಗುವ ಶಕ್ತಿಯನ್ನು ನೀಡಲು ಶಿಕ್ಷಕರು ಸಿದ್ಧರಿದ್ದಾರೆ ಎಂದರು.
ಶಾಲೆಯ ನಿರ್ದೇಶಕ ಸಯ್ಯದ್ ನಕೀರ್ ರಜಾ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ರಾಷ್ಟ್ರ ಮಟ್ಟದಲ್ಲಿ ಬೆಳೆದು ಸಾಧನೆ ಮಾಡಬೇಕು ಎಂಬುದೇ ನಮ್ಮ ಆಶಯ. ಇದಕ್ಕಾಗಿ ಮೌಲ್ಯಾಧಾರಿತ ಶಿಕ್ಷಣಕ್ಕೆ ಪೂರಕವಾದ ವ್ಯವಸ್ಥೆಯನ್ನು ಶಾಲೆಯಲ್ಲಿ ಕಲ್ಪಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಮಾಣಪತ್ರವನ್ನು ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಮುಖ್ಯಸ್ಥರಾದ ಅಕ್ರಂ ರಜಾ, ಹಾಷಿಮಿ ರಜಾ, ಪ್ರಾಂಶುಪಾಲರಾದ ತಾರ್ಹೆ, ಜೀಷನ್ ರಜಾ ಭಾಗವಹಿಸಿದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post