ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿಯ ಕಲ್ಲಿನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿನ ಪ್ರತೀ ಮನೆಗೆ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ಮಾಡಿದರು.
ಬಳಿಕ ಮಾತನಾಡಿದ ಪಿಡಿಒ ಬಸವರಾಜ್ ಬಳೂಟಗಿ, ಕೋವಿಡ್ 19 ಸೋಂಕಿನ ಬೆನ್ನಲ್ಲೆ ಇಡೀ ದೇಶ ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಸಂಕಷ್ಟಕ್ಕೆ ಈಡಾಗಿದೆ. ಆದರೂ ಕೂಡ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಕೊಂಡು ಬರುತ್ತಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಮನೆಯಲ್ಲಿರುವ ಪ್ರತಿಯೊಬ್ಬರ ಆರೋಗ್ಯ ತಪಾಸಣೆ (ಸ್ಕ್ರೀನಿಂಗ್) ಮಾಡುತ್ತಿದ್ದಾರೆ. ಜನತೆ ಸಹಕಾರ್ ನೀಡಿ ಕೋವಿಡ್ 19 ನಿಯಂತ್ರಣೆಗೆ ಕೈಜೋಡಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಾದ ಪದ್ಮಾವತಿ, ವಿಮಲಮ್ಮ, ಗ್ರಾಮ ಪಂಚಾಯತಿ ಸದಸ್ಯೆ ಸುವರ್ಣಾ ಅಜಯ್ ಇದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post