ಗೌರಿಬಿದನೂರು: ತಾಲೂಕಿನ ವಿವಿಧ ಕಾಲೇಜುಗಳಲ್ಲಿ ವಿವಿಧ ಸ್ಥರಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಸಕಾಲದಲ್ಲಿ ಅರ್ಜಿ ಸಲ್ಲಿಸಿ ಸರ್ಕಾರದಿಂದ ಸಿಗುವ ಸಂಪೂರ್ಣ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಾಗರಾಜ್ ತಿಳಿಸಿದರು.
ನಗರದ ನ್ಯಾಷನಲ್ ಕಾಲೇಜಿನಲ್ಲಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಸಕಾಲದಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿ ಅವರು ಮಾತನಾಡಿದರು.
2019-20 ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯ್ತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಪ್ರತಿಯೊಬ್ಬರೂ ಈ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸಬೇಕಾಗಿದೆ. ಇದರಿಂದ ನಿಮ್ಮೆಲ್ಲರ ವ್ಯಾಸಂಗಕ್ಕೆ ಸಹಕಾರಿಯಾಗಲಿದೆ. ಅರ್ಜಿ ಸಲ್ಲಿಸಲು ಗೊಂದಲವಿದ್ದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸಂಪರ್ಕಿಸಿ ಪೂರಕವಾದ ಮಾಹಿತಿ ಪಡೆಯಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Discussion about this post