No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಕ್ಕಳಲ್ಲಿ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿ

kalpa News by kalpa News
February 18, 2020
in Small Bytes, ಚಿಕ್ಕ ಬಳ್ಳಾಪುರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೌರಿಬಿದನೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಕಲಿಯುವ ಜೊತೆಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿತು ಜೀವನದಲ್ಲಿ ಉನ್ನತ ಮಟ್ಟಕ್ಕೇರಬೇಕಾಗಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಖ್ಯಾತ ವಿಜ್ಞಾನಿ ಪ್ರೊ.ಕೆ.ಪಿ.ಜೆ.ರೆಡ್ಡಿ ಕರೆ ನೀಡಿದರು.

ಶ್ರೀ ವಿವೇಕಾನಂದ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ’ವಿವೇಕೋತ್ಸವ – 2020’ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಪ್ರತಿಭೆ ಅಡಗಿರುತ್ತದೆ. ಪೋಷಕರು ಅದನ್ನು ಗುರುತಿಸಿ ಉತ್ತಮ ಶಾಲೆಗೆ ಸೇರಿಸಿದಲ್ಲಿ ಅದಕ್ಕೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ದೊರೆತು ಸಮಾಜದಲ್ಲಿ ಸತ್ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲಿಯೇ ಒಂದು ನಿರ್ಧಿಷ್ಟ ಗುರಿಯನ್ನು ಹೊಂದುವಂತೆ ಶಿಕ್ಷಕರು ಮತ್ತು ಪೋಷಕರು ಅವರಲ್ಲಿ ಆಸಕ್ತಿ ತುಂಬಬೇಕಾಗಿದೆ. ಪ್ರತಿಯೊಬ್ಬರೂ ಕೂಡ ಎಷ್ಟೆ ಎತ್ತರಕ್ಕೆ ಬೆಳೆದರೂ ಕೂಡ ಅಕ್ಷರ ಕಲಿತ ಶಾಲೆ ಮತ್ತು ಜೀವನ ರೂಪಿಸಿದ ಊರನ್ನು ಎಂದಿಗೂ ಮರೆಯಬಾರದು. ಅದರಂತೆ ನಾನು ವಿಶ್ವದಾದ್ಯಂತ ವಿವಿಧ ಸಂಶೋಧನೆಯಲ್ಲಿ ಖ್ಯಾತಿ ಪಡೆದರೂ ಕೂಡ ತಾಯ್ನಾಡಿಗೆ ಏನಾದರೂ ಕೊಡುಗೆ ಕೊಡಬೇಕು ಎಂಬ ಹಂಬಲವಿದೆ ಎಂದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿ.ಆರ್. ನರಸಿಂಹಮೂರ್ತಿ ಮಾತನಾಡಿ, ನಗರದಲ್ಲಿ ಎಷ್ಟೆ ಪ್ರತಿಷ್ಟಿತ ಶಾಲೆಗಳಿದ್ದರೂ ಕೂಡ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಶೇ.35ರಷ್ಟು ಫಲಿತಾಂಶವಿರುವ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಅವರನ್ನು ಶೇ.80ರಷ್ಟು ಗಳಿಸುವಂತೆ ಮಾಡುವುದೇ ನಿಜವಾದ ಸಾಧನೆಯಾಗಿದೆ. ಇದರಿಂದ ಶಾಲೆಯ ಕೀರ್ತಿ ಹೆಚ್ಚುವುದಲ್ಲದೆ ಪೋಷಕರಲ್ಲಿ ಆತ್ಮವಿಶ್ವಾಸ ಹೆಚ್ವಿಸಲು ಕಾರಣವಾಗಿತ್ತದೆ. ಈ ನಿಟ್ಟಿನಲ್ಲಿ ಶಾಲೆಯು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಲಾಗುವುದು ಎಂದರು.

ನಗರ ಠಾಣೆಯ ಪಿಎಸ್‌ಐ ವಿ. ಅವಿನಾಶ್ ಮಾತನಾಡಿ, ಈ ಭೂಮಿಯ ಮೇಲೆ ಜನ್ಮ ಪಡೆದ ಪ್ರತಿಯೊಬ್ಬ ಮಗುವಿನಲ್ಲೂ ಒಂದೊಂದು ಪ್ರತಿಭೆ ಇದ್ದೇ ಇರುತ್ತೆ. ಅಕ್ಷರ ಕಲಿಕೆಯಲ್ಲಿ ಹಿಂದುಳಿದಿರಬಹುದು. ಆದರೆ ಅವರಲ್ಲಿನ ಪ್ರತಿಭೆಗೆ ಸೂಕ್ತ ವೇದಿಕೆ ದೊರೆತಲ್ಲಿ ಇಡೀ ವಿಶ್ವವನ್ನೇ ಜಯಿಸಲು ಮುಂದಾಗುತ್ತಾರೆ. ಆದ್ದರಿಂದ ಶಾಲೆಯಲ್ಲಿ ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡುವ ಮೂಲಕ ಸಮಾಜಕ್ಕೆ ಪೂರಕ ಶಕ್ತಿಗಳನ್ನು ರೂಪಿಸಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶೈಕ್ಷಣಿಕ ಸಾಲಿನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಯನ್ನು ವೇದಿಕೆಯ ಗಣ್ಯರು ಬಹುಮಾನ ನೀಡಿ ಅಭಿನಂದಿಸಿದರು. ಶಾಲಾ ವಿದ್ಯಾರ್ಥಿಗಳು ವಿವಿಧ ರೀತಿಯ ಸಾಂಸ್ಕೃತಿಕ ನ್ಯತ್ಯಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು.

ಇದೇ ವೇಳೆ ಮಹಿಳಾ ಸಾಧಕಿ ಡಾ.ಸಿ. ಗಂಗಲಕ್ಷ್ಮಮ್ಮ, ಕೆಎಎಸ್ ಅಧಿಕಾರಿಣಿ ಸ್ಮಿತ ಹಾಗೂ ನಿವೃತ್ತ ಯೋಧ ಎಂ.ಎಲ್. ಶಾಂತಪ್ಪ ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಆಡಳಿತಾಧಿಕಾರಿ ಟಿ.ಎನ್. ರಾಮಪ್ಪ, ಕಾರ್ಯದರ್ಶಿ ಸಿ.ಎನ್. ನಂಜೇಗೌಡ, ಮುಖ್ಯ ಶಿಕ್ಷಕಿ ರಾಧಮ್ಮ, ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲರಾದ ಕೆ.ವಿ. ಸತ್ಯನಾರಾಯಣ್, ಉಪನ್ಯಾಸಕರಾದ ರವಿಮೋಹನ್ ರೆಡ್ಡಿ, ಎ. ರಾಮಚಂದ್ರಪ್ಪ, ಸಂಕೇತ್ ಶ್ರೀರಾಮ್, ಮಧುಕರ್ ಸೂಡ, ಟಿ.ಸಿ. ದೊಡ್ಡೇಗೌಡ, ಬಿ. ಮಂಜುನಾಥ್, ನಿರ್ದೇಶಕರಾದ ವೇದಾವತಿ, ಉಮಾದೇವಿ, ಸಿ.ಎನ್.ಪ್ರಭಾಕರ್, ಶಿಕ್ಷಕರಾದ ಕೃಷ್ಣಕುಮಾರ್, ಧನಂಜಯ್, ನರಸಿಂಹಮೂರ್ತಿ, ಮುಖಂಡರಾದ ಬಸಪ್ಪರೆಡ್ಡಿ, ವರಲಕ್ಷ್ಮಿ, ಪ್ರಭಾರ್ಕ, ಹಂಪಸಂದ್ರ ದೇವು, ಜಗದೀಶ್, ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get in Touch With Us info@kalpa.news Whatsapp: 9481252093

Tags: Bayalu Seeme NewsChikkaballapur NewsGauribidanurKannada News WebsiteLatestNewsKannadaSchoolSchool DaySri Vivekananda Vidyanikethana Schoolಗೌರಿಬಿದನೂರುಶ್ರೀ ವಿವೇಕಾನಂದ ವಿದ್ಯಾನಿಕೇತನ ಶಾಲೆ
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಳೆಹೊನ್ನೂರು: ಕೆರೆ ಒತ್ತುವರಿ ತೆರವು ಕಾರ್ಯಾಚರಣೆ

Next Post

ಗಂಗಾ ಭಗೀರಥಿ ದೇವಾಲಯ ಕಾಮಗಾರಿ ಗುಣಮಟ್ಟ ಕಾಪಾಡಲು ಡಿಸಿ ಸೂಚನೆ

kalpa News

kalpa News

Next Post

ಗಂಗಾ ಭಗೀರಥಿ ದೇವಾಲಯ ಕಾಮಗಾರಿ ಗುಣಮಟ್ಟ ಕಾಪಾಡಲು ಡಿಸಿ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL