ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ಗ್ರಾಮೀಣ ಭಾಗದ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಪ ವಿದ್ಯುತ್ ಸರಬರಾಜು ಘಟಕವನ್ನು ಆರಂಭಿಸಲಾಗುವುದು ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು.
ತಾಲ್ಲೂಕಿನ ಅಲೀಪುರದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ವಿದ್ಯುತ್ ಸರಬರಾಜಿನ ಉಪಘಟಕಕ್ಕೆ ಗುದ್ದಲಿ ಪೂಜೆ ಮಾಡಿ ಅವರು ಮಾತನಾಡಿದರು.
ಈ ಭಾಗದಲ್ಲಿ ನಿತ್ಯ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಜನತೆಗೆ ಸಮಸ್ಯೆಯಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸುಮಾರು 9.5 ಕಿ.ಮೀ ವ್ಯಾಪ್ತಿಯಲ್ಲಿ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಘಟಕವನ್ನು ಸ್ಥಾಪಿಸಲಾಗುವುದು. ಇದರಿಂದ ಗೃಹ ಬಳಕೆ ವಿದ್ಯುತ್ ಹಾಗೂ ರೈತರ ಪಂಪ್ ಸೆಟ್ ಗಳಿಗೆ ಅನುಕೂಲವಾಗಲಿದೆ ಎಂದರು.
ಕೆಪಿಟಿಸಿಎಲ್ ಇಲಾಖೆಯ ಸಹಾಯಕ ಇಂಜಿನಿಯರ್ ಧನರಾಜ್ ಮಾತನಾಡಿ, ಬೆಸ್ಕಾಂ ಇಲಾಖೆಯ ವತಿಯಿಂದ ಲೋಡ್ ಶೆಡ್ಡಿಂಕ್ ನ್ನು ತಡೆಯುವ ನಿಟ್ಟಿನಲ್ಲಿ ಅಲೀಪುರದಲ್ಲಿ ಸುಮಾರು 10.4 ಕೋಟಿ ರೂಗಳ ಅನುದಾನದಲ್ಲಿ 12.5 ಎಂವಿಎ ಟ್ರಾನ್ಸ್ ಪಾರ್ಮರ್ 66\11 ಕೆ.ವಿ ಯ ಉಪಘಟಕವನ್ನು ನಿರ್ಮಾಣ ಮಾಡಲಾಗುವುದು. ಇದು ಈ ಭಾಗದ ರೈತರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಬಿ.ಪಿ.ಅಶ್ವತ್ಥನಾರಾಯಣಗೌಡ, ಕರೀಂ ಅಬ್ಬಾಸ್, ಅಲೀ ರಜಾ, ಯಾಸಮಿ ರಜಾ, ಅಮ್ಜಾ ಹುಸೇನ್, ಔನ್ ಆಲೀ, ಶಾರೀಕ್ ಅಲೀ, ಲೋಕೇಶ್, ರಮೇಶ್, ಹರ್ಪತ್ ಹೈದರ್, ಸಖೀ ರಜಾ, ಶಂಕರರೆಡ್ಡಿ, ಶ್ರೀನಿವಾಸರೆಡ್ಡಿ, ಕೆಪಿಟಿಸಿಎಲ್ ನ ಕಾರ್ಯನಿರ್ವಾಹಕ ಇಂಜಿನಿಯರ್ ಶುಭಾರೆಡ್ಡಿ, ರತ್ನಾಬಾಯ್, ವಿನಯ್ ಕುಮಾರ್, ಮುರಳಿಬಾಬು ನಾರಾಯಣ ಸ್ವಾಮಿ, ಹಾಗೂ ಬೆಸ್ಕಾಂ ಸಿಬ್ಬಂದಿ ಇದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post