ಪಣಜಿ: ಕಳೆದ ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇದಕ್ಕಾಗಿ ಬಿಜೆಪಿ ಹೊಸ ನಾಯಕರ ಹುಡುಕಾಟದಲ್ಲಿದೆ.
ಪರಿಕ್ಕರ್ ಅವರ ಆರೋಗ್ಯ ಗಂಭೀರವಾಗಿರುವಂತೆಯೇ ಇತ್ತ ಬಿಜೆಪಿ ಕೂಡ ನೂತನ ಸಿಎಂ ಆಯ್ಕೆಗಾಗಿ ಕಸರತ್ತು ಆರಂಭಿಸಿದೆ. ಮೂಲಗಳ ಪ್ರಕಾರ ಈಗಾಗಲೇ ಬಿಜೆಪಿ ಹೈಕಮಾಂಡ್ ನೂತನ ಸಿಎಂಗಾಗಿ ಶೋಧ ಕಾರ್ಯ ಆರಂಭಿಸಿದೆ.
ಈಗಾಗಲೇ ಬಿಜೆಪಿ ಹೈಕಮಾಂಡ್ ಗೋವಾ ಬಿಜೆಪಿ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಇಂದು ಈ ಬಗ್ಗೆ ದೆಹಲಿಯಲ್ಲಿ ಸಭೆ ನಡೆಸಲಾಗುತ್ತಿದೆ.
ಶಾಸಕರೊಂದಿಗಿನ ಸಭೆ ಬಳಿಕ ಬಿಜೆಪಿ ಗೋವಾದ ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷ, ಗೋವಾ ಫಾರ್ವರ್ಡ್ ಪಾರ್ಟಿ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆಸಲಿದೆ.
















