ಅಹ್ಮದಾಬಾದ್: ಇಡಿಯ ದೇಶವನ್ನೇ ತಲ್ಲಣಗೊಳಿಸಿದ್ದ 2002ರ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಪ್ರಕಟವಾಗಿದ್ದು, ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಈ ಕುರಿತಂತೆ ಇಂದು ತೀರ್ಪು ಪ್ರಕಟಿಸಿರುವ ವಿಶೇಷ ನ್ಯಾಯಾಲಯ, ಇಬ್ಬರು ಆರೋಪಿಗಳಾದ ಫಾರೂಕ್ ಬಾನಾ ಹಾಗೂ ಇಮ್ರಾನ್ ಶೇರ್ ಅವರುಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಹುಸೇನ್ ಸುಲೇಮಾನ್ ಮೋಹನ್, ಕಸಮ್ ಭಮೇದಿ ಹಾಗೂ ಫರೂಕ್ ಧಾಂಟಿಯಾ ಅವರುಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ 2011ರ ಮಾರ್ಚ್ 1ರಂದು ದೋಷಾರೋಪಣೆ ಪಟ್ಟಿ ಸಲ್ಲಿಸಿ, 31 ಜನರ ಮೇಲೆ ದೋಷ ಹೊರಿಸಿತ್ತು. ಇದರಲ್ಲಿ 11 ಮಂದಿಗೆ ಗಲ್ಲು ಶಿಕ್ಷೆ ಹಾಗೂ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
2002 ರ ಫೆಬ್ರುವರಿ 27 ರ ಗೋಧ್ರಾ ರೈಲು ದುರಂತ ಘಟನೆಯಲ್ಲಿ 59 ಕರಸೇವಕರು ಸಜೀವ ದಹನವಾಗಿದ್ದರು.
Discussion about this post