No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಸಮರಸ-ಸಮರ ಎರಡಕ್ಕೂ ಸಜ್ಜಾಗಿ: ರಾಘವೇಶ್ವರ ಶ್ರೀ ಕರೆ

kalpa News by kalpa News
September 12, 2024
in ಉತ್ತರ ಕನ್ನಡ
0
ಸಮರಸ-ಸಮರ ಎರಡಕ್ಕೂ ಸಜ್ಜಾಗಿ: ರಾಘವೇಶ್ವರ ಶ್ರೀ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಸಮರಸ ಮತ್ತು ಸಮರ ಎರಡಕ್ಕೂ ಸಮಾಜ ಸಜ್ಜಾಗಬೇಕು. ಸಮಾಜದಲ್ಲಿ ಸಮರಸ ಮೂಡಿಸಲು ಶ್ರಮಿಸೋಣ. ಇದರ ಜತೆಜತೆಗೆ ನಮ್ಮತನವನ್ನು ಉಳಿಸಿಕೊಳ್ಳಲು ಹೋರಾಟದ ಕೆಚ್ಚನ್ನೂ ರೂಢಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ #Raghaweshwara Shri ಕರೆ ನೀಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು, 53ನೇ ದಿನವಾದ ಬುಧವಾರ ಮುಳ್ಳೇರಿಯಾ ಮಂಡಲದ ಕೊಡಗು, ಗುಂಪೆ, ಕಾಸರಗೋಡು, ಚಂದ್ರಗಿರಿ, ಗುತ್ತಿಗಾರು ಮತ್ತು ಸುಳ್ಯ ವಲಯಗಳ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು.
ಇಂದು ಜಗತ್ತಿಗೆ ಸಮರ ಗೊತ್ತೇ ವಿನಃ ಸಮರಸ ಗೊತ್ತಿಲ್ಲ. ಮುಳ್ಳೇರಿಯಾ ಮಂಡಲ ವ್ಯಾಪ್ತಿಯಲ್ಲಿ ಸಮರಸ ಟ್ರಸ್ಟ್ ಹೆಸರಿನಲ್ಲಿ ಒಳ್ಳೆಯ ಕಾರ್ಯಗಳು ನಡೆಯುತ್ತಿವೆ. ಸುಮಾರು 2 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಭವ್ಯ ಸಭಾಗೃಹ ಮತ್ತು ಗುರುನಿವಾಸ ನಿರ್ಮಾಣವಾಗುತ್ತಿದೆ. ಇದು ಸಕಾಲದಲ್ಲಿ ಪೂರ್ಣಗೊಳ್ಳಲು ಸಮಾಜದ ಸ್ಪಂದನೆ ಬೇಕು ಎಂದು ಹೇಳಿದರು. ಸಮಾಜದ ಸಾಮರಸ್ಯಕ್ಕಾಗಿ ಸಂಘಟನೆ ಶ್ರಮಿಸಬೇಕು, ನಮ್ಮ ಇಡೀ ಸಂಘಟನೆಗೆ ಹೆಮ್ಮೆಯಾಗುವ ರೀತಿಯಲ್ಲಿ ಇಡೀ ಸಮಾಜ ಇದಕ್ಕೆ ಸ್ಪಂದಿಸಬೇಕು ಎಂದು ಸೂಚಿಸಿದರು.

Also read: ಸಣ್ಣ ಘಟನೆ, ಆಕಸ್ಮಿಕ ಕಲ್ಲು ತೂರಾಟ, ಕೋಮುಗಲಭೆ ಅಲ್ಲ | ನಾಗಮಂಗಲ ಗಲಭೆ ಬಗ್ಗೆ ಗೃಹ ಸಚಿವರ ತಾತ್ಸಾರದ ಹೇಳಿಕೆ

ಪೊಸಡಿಗುಂಪೆಯ ಸುಂದರ ಪರಿಸರದಲ್ಲಿ, ಪರ್ವತಾಗ್ರದಲ್ಲಿ ಶಂಕರಧ್ಯಾನ ಮಂದಿರ ಸ್ಥಾಪನೆಯ ಉದ್ದೇಶದಿಂದ ಈ ಭಾಗದ ಶಿಷ್ಯಭಕ್ತರು ಸುಮಾರು 10 ಎಕರೆ ಭೂಮಿಯನ್ನು ಕ್ರೋಢೀಕರಿಸಿದ್ದಾರೆ. ಈ ಭೂಮಿಯ ಮೇಲೆ ಸರ್ಕಾರದ ಕೆಟ್ಟ ದೃಷ್ಟಿ ಬಿದ್ದಿದೆ. ಇದನ್ನು ಉಳಿಸಿಕೊಳ್ಳಲು ಸಂಘಟಿತ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ನಮ್ಮತನವನ್ನು ಉಳಿಸಿಕೊಳ್ಳಲು ಸಮರ ಅನಿವಾರ್ಯವಾದಲ್ಲಿ, ಅದಕ್ಕೆ ಸಜ್ಜಾಗಬೇಕು. ಭೂಮಿ ಕಳೆದುಕೊಳ್ಳಲು ಬೇಸರವಿಲ್ಲ. ದೊಡ್ಡ ಪ್ರಮಾಣದ ಭೂಮಿಯಲ್ಲಿ ಮಠ ಕಳೆದುಕೊಂಡಿದೆ. ಆದರೆ ಹೀಗೆ ಕಳೆದುಕೊಂಡ ಭೂಮಿ ಅದು ಸದುಪಯೋಗವಾಗಬೇಕು. ದುರುಪಯೋಗವಾಗುವುದಾದಲ್ಲಿ ಭೂಮಿ ನೀಡಲು ಸಿದ್ಧರಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಲ ಸರಣಿಯ ಪ್ರವಚನ ಮುಂದುವರಿಸಿದ ಶ್ರೀಗಳು, ನಾವು ದೈವಜ್ಞರಿಗೆ ನೀಡುವ ತಾಂಬೂಲ ನಮ್ಮ ಪೂರ್ವಾಪರಗಳನ್ನು ತಿಳಿಸಬಲ್ಲದು. ಇದರ ಮೂಲಕ ಶುಭಾಶುಭ ಫಲಗಳನ್ನು ಕೂಡಾ ಸುಲಭವಾಗಿ ತಿಳಿದುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಹನ್ನೆರಡು ಎಲೆಗಳಿಂದ ದ್ವಾದಶಭಾವಗಳನ್ನು ಅರ್ಥ ಮಾಡಿಕೊಳ್ಳಬಹುದು ಎಂದು ವಿಶ್ಲೇಷಿಸಿದರು.

ತಾಂಬೂಲ ಆರೋಗ್ಯಕ್ಕೆ ಸರ್ವಶ್ರೇಷ್ಠ ಮತ್ತು ಸಾಂಪ್ರದಾಯಿಕ ರೂಢಿ. ಆದರೆ ಇಂದಿನ ಸಮಾಜದ ಒಂದು ವರ್ಗ ಇದರ ಬಳಕೆಯನ್ನೇ ಕೈಬಿಟ್ಟರೆ, ಮತ್ತೊಂದು ವರ್ಗ ದುರ್ಬಳಕೆ ಮಾಡಿಕೊಳ್ಳುತ್ತಿದೆ. ದೇಹದ ಧಾತುಸಾಮ್ಯಕ್ಕೆ ಇದು ಅಗತ್ಯ. ಯೋಗಸಾಧನೆಗೆ ಧಾತುಸಾಮ್ಯ ಅಗತ್ಯ. ಹೀಗೆ ತಾಂಬೂಲ ಯೋಗ ಮತ್ತು ಭೋಗ ಜೀವನಕ್ಕೂ ಬೇಕು ಎಂದು ಪ್ರತಿಪಾದಿಸಿದರು. ಹದತಪ್ಪದಂತೆ ಬಳಸುವ ಕಲೆ ನಮ್ಮದಾಗಬೇಕು ಎಂದು ಕಿವಿಮಾತು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ಶಾಸ್ತ್ರೀಯ ತಾಂಬೂಲದಲ್ಲಿ ತಂಬಾಕಿನಂಥ ಕೆಟ್ಟ ಅಂಶಗಳಿಗೆ ಸ್ಥಾನವಿಲ್ಲ. ತಂಬಾಕಿನ ಕಾರಣದಿಂದಲೇ ತಾಂಬೂಲ ಕೆಟ್ಟದು ಎಂಬ ಅಭಿಪ್ರಾಯಕ್ಕೆ ಸಮಾಜ ಬಂದಿರುವುದು ವಿಪರ್ಯಾಸ ಎಂದರು. ತಾಂಬೂಲ ಚರ್ವಣವನ್ನು ಗೃಹಸ್ಥರು ಅನುಸರಿಸಬೇಕು. ಜನಜೀವನದಲ್ಲಿ ಇದರ ಬಳಕೆ ಹೆಚ್ಚಬೇಕು ಎಂದು ಅಭಿಪ್ರಾಯಪಟ್ಟರು.

ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಉಪಾಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಭಟ್ ಸರ್ಪಮಲೆ, ವಿದ್ಯಾರ್ಥಿ ಪ್ರಧಾನ ಈಶ್ವರ ಪ್ರಸಾದ್ ಕನ್ಯಾನ, ಯುವ ಪ್ರಧಾನ ಕೇಶವ ಪ್ರಕಾಶ್ ಎಂ, ಮುಳ್ಳೇರಿಯಾ ಮಂಡಲಾಧ್ಯಕ್ಷ ಕೃಷ್ಣಮೂರ್ತಿ ಮಾಡಾವು, ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆರೆಮೂಲೆ, ಚಾತುಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ ಸುರ್ವಣಗದ್ದೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶ್ರೀಶ ಶಾಸ್ತ್ರಿ, ದೈವಜ್ಞರಾದ ಕೇಶವ ಭಟ್ ಮಿತ್ತೂರು ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaweshwara shriUttara Kannadaಗೋಕರ್ಣಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಣ್ಣ ಘಟನೆ, ಆಕಸ್ಮಿಕ ಕಲ್ಲು ತೂರಾಟ, ಕೋಮುಗಲಭೆ ಅಲ್ಲ | ನಾಗಮಂಗಲ ಗಲಭೆ ಬಗ್ಗೆ ಗೃಹ ಸಚಿವರ ತಾತ್ಸಾರದ ಹೇಳಿಕೆ

Next Post

ನಾಗಮಂಗಲ ಗಲಭೆ | ಪೊಲೀಸ್ ಠಾಣೆ ಮುಂದೆ ಮಹಿಳೆಯರ ಹೈಡ್ರಾಮಾ | ಆರಕ್ಷಕರು ಹೈರಾಣು

kalpa News

kalpa News

Next Post
ನಾಗಮಂಗಲ ಗಲಭೆ | ಪೊಲೀಸ್ ಠಾಣೆ ಮುಂದೆ ಮಹಿಳೆಯರ ಹೈಡ್ರಾಮಾ | ಆರಕ್ಷಕರು ಹೈರಾಣು

ನಾಗಮಂಗಲ ಗಲಭೆ | ಪೊಲೀಸ್ ಠಾಣೆ ಮುಂದೆ ಮಹಿಳೆಯರ ಹೈಡ್ರಾಮಾ | ಆರಕ್ಷಕರು ಹೈರಾಣು

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL