ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಸ್ವಭಾಷೆ ಎನ್ನುವುದು ಸಹಜ ಭಾಷೆ; ನಮ್ಮ ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ. ನಾವು ಸಹಜ ಭಾಷೆ ಬದಲು ಬೇರೆ ಭಾಷೆ ಬಳಸುತ್ತಿದ್ದೇವೆ ಎಂದರೆ ನಮ್ಮ ಜೀವನ ಸಹಜವಾಗಿಲ್ಲ ಎಂಬ ಅರ್ಥ ಎಂದು ಶ್ರೀಮಜ್ಜಗದ್ಗರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು.
ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 34ನೇ ದಿನವಾದ ಮಂಗಳವಾರ ಬೆಂಗಳೂರಿನ ಮಂಜುನಾಥ ಹೆಬ್ಬಾಲೆ ಕುಟುಂಬದವರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ನಮ್ಮ ಭಾಷೆಯ ಪದಗಳನ್ನು ಮರೆತು ಬೇರೆ ಭಾಷೆಯ ಪದಗಳನ್ನು ನಮ್ಮ ಸಹಜ ಭಾಷೆಯಲ್ಲಿ ಕಲಬೆರಕೆ ಮಾಡಿಕೊಂಡಿದ್ದೇವೆ ಎಂದರೆ ನಮ್ಮ ಜೀವನ ಸಹಜವಾಗಿಲ್ಲ ಎಂಬ ಅರ್ಥ ಎಂದು ವಿಶ್ಲೇಷಿಸಿದರು.

ಚಾರ್ಜ್ ಎಂಬ ಪದಕ್ಕೆ ಇಂಗ್ಲಿಷ್‍ನಲ್ಲಿ ವಿದ್ಯುತ್ ತುಂಬುವುದು ಎಂಬ ಅರ್ಥ ನಿಘಂಟುಗಳಲ್ಲಿ ಕೂಡಾ ಮೊದಲಿಗೆ ಇಲ್ಲ. ಹಣ ವಿಧಿಸುವುದು, ಶುಲ್ಕ, ಆರೋಪ ಹೊರಿಸುವುದು, ಅಧಿಕಾರ, ಆಜ್ಞೆ ಮಾಡುವುದು, ಮೇಲೇರಿ ಬರುವುದು ಎಂಬ ಅರ್ಥಗಳಿವೆ. ಕೊನೆಗೆ ವಿದ್ಯುತ್ ಭರ್ತಿ ಮಾಡುವುದು ಎಂಬ ಅರ್ಥ ನೀಡಲಾಗಿದೆ. ಅಂದರೆ ಅವರಲ್ಲಿ ಕೂಡಾ ಬೇರೆ ಅರ್ಥದ ಪದವನ್ನು ವಿದ್ಯುತ್ ಪೂರಣಕ್ಕೆ ಬಳಸಲಾಯಿತು ಎನ್ನುವುದು ತಿಳಿಯುತ್ತದೆ ಎಂದು ವಿವರಿಸಿದರು.

ನಾಡವ, ಸಿದ್ದಿ ಮತ್ತು ಬೋವಿ ಸಮಾಜದವರಿಂದ ಸುವರ್ಣ ಪಾದುಕಾಪೂಜೆ ನೆರವೇರಿತು. ಮೂರೂ ಸಮಾಜಗಳಿಂದ ದೊಡ್ಡ ಸಂಂಖ್ಯೆಯಲ್ಲಿ ಆಗಮಿಸಿದ ಸಮಾಜ ಬಾಂಧವರು ಸಾಂಪ್ರದಾಯಿಕ ಗುರುಪೀಠಕ್ಕೆ ವಾರ್ಷಿಕ ಸೇವೆ ಸಮರ್ಪಿಸಿದರು. ಸಮಾಜದ ಪ್ರತಿ ಮನೆಗಳಿಗೆ ವಿತರಿಸಲು ಸಮಾಜದ ಮುಖಂಡರು ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಸಂಕಷ್ಟಿಚತುರ್ಥಿಯ ದಿನವಾದ ಮಂಗಳವಾರ ಗೋಕರ್ಣದ ಗಣಪತಿ ದೇವಾಲಯದಲ್ಲಿ ಶ್ರೀಮಠದ ವತಿಯಿಂದ ಮೋದಕ ಕಣಜ ಸೇವೆ ನೆರವೇರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post