ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಧರ್ಮದ ತಕ್ಕಡಿ ಮೇಲಕ್ಕೆದ್ದಾಗ ಮಾತ್ರ ನಮ್ಮ ಜೀವನ ಪಾವನವಾಗುತ್ತದೆ. ಜೀವನದ ಪ್ರತಿ ಹಂತದಲ್ಲಿ ಸಂತುಲನ ಅಗತ್ಯ. ಇದನ್ನು ಸಾಧಿಸಬೇಕೆನ್ನುವುದೇ ತುಲಾಭಾರದ ಸಂದೇಶ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಮೀಜಿ #Raghaweshwara shri ನುಡಿದರು.
ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಬುಧವಾರ ತುಲಾಭಾರ ಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು. ನಾಣ್ಯ, ಜೇನುತುಪ್ಪ, ಅಡಿಕೆ, ಒಣಹಣ್ಣುಗಳು, ದಿನಸಿ ವಸ್ತುಗಳು, ಬೆಲ್ಲ, ನವಧಾನ್ಯ, ತೆಂಗಿನಕಾಯಿ, ಅಕ್ಕಿ, ಒಣದ್ರಾಕ್ಷಿ ಹೀಗೆ ವಿವಿಧ ಬಗೆಯ ಸುವಸ್ತುಗಳಿಂದ ಭಕ್ತರು 126ಕ್ಕೂ ಹೆಚ್ಚು ತುಲಾಭಾರ ಸೇವೆಗಳನ್ನು ನಡೆಸಿಕೊಟ್ಟರು.

ಮನೆಯಲ್ಲಿ ಲಕ್ಷ್ಮಿ ತುಂಬಿ ತುಳುಕಲಿ. ಮನಸ್ಸು, ಹೃದಯದಲ್ಲಿ ಶ್ರೀಮನ್ನಾರಾಯಣ ತುಂಬಲಿ. ಪ್ರತಿಯೊಬ್ಬರ ಬಾಳಿನಲ್ಲಿ ಸಮೃದ್ಧಿ ಮತ್ತು ಧಾರ್ಮಿಕತೆ ತುಂಬಲಿ ಎಂದು ಆಶಿಸಿದರು.
ಶ್ರೀಮಠದ ಪಾರಂಪರಿಕ ಶಿಷ್ಯವರ್ಗಗಳಲ್ಲೊಂದಾದ ನಾಮಧಾರಿ ಸಮಾಜ ಮತ್ತು ಹರಿಕಾಂತ ಸಮಾಜದ ಗಣ್ಯರು ಸ್ವರ್ಣಪಾದುಕೆ ಸೇವೆ ನೆರವೇರಿಸಿದರು. ಯಲ್ಲಾಪುರ ದತ್ತಮಂದಿರದ ಆಡಳಿತ ಸಮಿತಿ ವತಿಯಿಂದ ಪಾದಪೂಜೆ ಸೇವೆ ನಡೆಯಿತು.

ಅನಾವರಣ
ಗೋಕರ್ಣದ ವರದೇಶ್ವರ ದೇವಾಲಯ ಶ್ರೀಮಠದ ಮೂಲದ ಮೂಲ. ಶ್ರೀಮಠ ಸ್ಥಾಪನೆಗೆ ಮೂಲವಾದದ್ದು ವರದೇಶ್ವರ ಸನ್ನಿಧಿ. ಶಂಕರರು- ವರದ ಮುನಿಗಳು ಸಮಾಗಮಗೊಂಡ ಈ ಕ್ಷೇತ್ರ ಇಂದು ಅವಗಣನೆಗೆ ಒಳಗಾಗಿದೆ. ಶ್ರೀಮಠದ ಮೂಲಚೈತನ್ಯ ಇಲ್ಲಿದೆ. ರಾಮಾದಿ ವಿಗ್ರಹಗಳು ಶಂಕರರ ಕೈಗೆ ಬಂದ ಬಳಿಕ ಇದರ ಪೂಜಾಕೈಂಕರ್ಯ ಮತ್ತು ಸಮಾಜೋದ್ಧಾರಕ್ಕಾಗಿ ಮಠ ಸ್ಥಾಪನೆ ಮಾಡುವ ನಿರ್ಧಾರ ಕೈಗೊಂಡ ಪುಣ್ಯಧಾಮ ಇದು ಎಂದು ಬಣ್ಣಿಸಿದರು. ಶ್ರೀಮಠದ ಶಿಷ್ಯಭಕ್ತರು ವರದೇಶ್ವರನ ಸೇವೆಯನ್ನು ಹೆಚ್ಚು ಹೆಚ್ಚು ಮಾಡುವಂತಾಗಬೇಕು ಎಂದು ಆಶಿಸಿದರು. ವರದೇಶ್ವರ ದೇವಾಲಯದ ಪ್ರಾಚೀನ ಇತಿಹಾಸ ಮತ್ತು ಮಹತಿಯನ್ನು ದತ್ತಾತ್ರೇಯ ನಾರಾಯಣ ಹಿರೇಗಂಗೆ ನೆರವೇರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post