No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಧರ್ಮದ ತಕ್ಕಡಿ ಮೇಲೆದ್ದಾಗ ಜೀವನ ಪಾವನ: ರಾಘವೇಶ್ವರ ಶ್ರೀ

kalpa News by kalpa News
August 15, 2024
in ಉತ್ತರ ಕನ್ನಡ
0
ಧರ್ಮದ ತಕ್ಕಡಿ ಮೇಲೆದ್ದಾಗ ಜೀವನ ಪಾವನ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಧರ್ಮದ ತಕ್ಕಡಿ ಮೇಲಕ್ಕೆದ್ದಾಗ ಮಾತ್ರ ನಮ್ಮ ಜೀವನ ಪಾವನವಾಗುತ್ತದೆ. ಜೀವನದ ಪ್ರತಿ ಹಂತದಲ್ಲಿ ಸಂತುಲನ ಅಗತ್ಯ. ಇದನ್ನು ಸಾಧಿಸಬೇಕೆನ್ನುವುದೇ ತುಲಾಭಾರದ ಸಂದೇಶ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಮೀಜಿ #Raghaweshwara shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಬುಧವಾರ ತುಲಾಭಾರ ಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು. ನಾಣ್ಯ, ಜೇನುತುಪ್ಪ, ಅಡಿಕೆ, ಒಣಹಣ್ಣುಗಳು, ದಿನಸಿ ವಸ್ತುಗಳು, ಬೆಲ್ಲ, ನವಧಾನ್ಯ, ತೆಂಗಿನಕಾಯಿ, ಅಕ್ಕಿ, ಒಣದ್ರಾಕ್ಷಿ ಹೀಗೆ ವಿವಿಧ ಬಗೆಯ ಸುವಸ್ತುಗಳಿಂದ ಭಕ್ತರು 126ಕ್ಕೂ ಹೆಚ್ಚು ತುಲಾಭಾರ ಸೇವೆಗಳನ್ನು ನಡೆಸಿಕೊಟ್ಟರು.
“ಜೀವನವೆಂಬ ತಕ್ಕಡಿಯ ಸಂತುಲನದಲ್ಲಿ ಧರ್ಮ ಮಹತ್ ಪ್ರಮಾಣದಲ್ಲಿರಬೇಕು. ಉಳಿದೆಲ್ಲ ಪೂರಕವಾಗಿ ಸೇರಿಕೊಳ್ಳಬೇಕು. ವಿಷಯ ವಸ್ತುಗಳು ಭಾರದಿಂದ ಕೆಳಕ್ಕೆ ಬಂದು ಧರ್ಮ ಮೇಲಕ್ಕೇಳುವುದು ತುಲಾಭಾರದ ಸಂಕೇತ” ಎಂದು ನುಡಿದರು.

ಮನೆಯಲ್ಲಿ ಲಕ್ಷ್ಮಿ ತುಂಬಿ ತುಳುಕಲಿ. ಮನಸ್ಸು, ಹೃದಯದಲ್ಲಿ ಶ್ರೀಮನ್ನಾರಾಯಣ ತುಂಬಲಿ. ಪ್ರತಿಯೊಬ್ಬರ ಬಾಳಿನಲ್ಲಿ ಸಮೃದ್ಧಿ ಮತ್ತು ಧಾರ್ಮಿಕತೆ ತುಂಬಲಿ ಎಂದು ಆಶಿಸಿದರು.

ಶ್ರೀಮಠದ ಪಾರಂಪರಿಕ ಶಿಷ್ಯವರ್ಗಗಳಲ್ಲೊಂದಾದ ನಾಮಧಾರಿ ಸಮಾಜ ಮತ್ತು ಹರಿಕಾಂತ ಸಮಾಜದ ಗಣ್ಯರು ಸ್ವರ್ಣಪಾದುಕೆ ಸೇವೆ ನೆರವೇರಿಸಿದರು. ಯಲ್ಲಾಪುರ ದತ್ತಮಂದಿರದ ಆಡಳಿತ ಸಮಿತಿ ವತಿಯಿಂದ ಪಾದಪೂಜೆ ಸೇವೆ ನಡೆಯಿತು.
ತಕ್ಕಡಿ ಸಂತುಲವನ್ನು ಸೂಚಿಸುತ್ತದೆ. ಗುರುಗಳು ಪರಮಾರ್ಥಕ್ಕೆ ಹತ್ತಿರ; ವ್ಯವಹಾರಕ್ಕೆ ದೂರ ಎಂಬ ಅರ್ಥ. ತಕ್ಕಡಿ ವ್ಯವಹಾರದ ಸಂಕೇತ. ಆದ್ದರಿಂದ ಶ್ರೀಸಂಸ್ಥಾನದವರ ತುಲಾಭಾರದ ಬಗ್ಗೆ ಪ್ರಶ್ನೆ ಉದ್ಭವಿಸಬಹುದು. ನಮ್ಮ ದೇಹ, ಸಮಾಜ ಸುವ್ಯವಸ್ಥಿತವಾಗಿ ನಡೆಯುವುದೇ ಸಂತುಲನದಿಂದ. ಜೀವನದ ಪ್ರತಿ ಹಂತದಲ್ಲೂ ಸಂತುಲನ ಅಗತ್ಯ. ಅದು ತಪ್ಪಿದರೆ ಇಡೀ ಜೀವನವೇ ಬರ್ಬರವಾಗುತ್ತದೆ ಎಂದು ಎಚ್ಚರಿಸಿದರು.

ಅನಾವರಣ
ಗೋಕರ್ಣದ ವರದೇಶ್ವರ ದೇವಾಲಯ ಶ್ರೀಮಠದ ಮೂಲದ ಮೂಲ. ಶ್ರೀಮಠ ಸ್ಥಾಪನೆಗೆ ಮೂಲವಾದದ್ದು ವರದೇಶ್ವರ ಸನ್ನಿಧಿ. ಶಂಕರರು- ವರದ ಮುನಿಗಳು ಸಮಾಗಮಗೊಂಡ ಈ ಕ್ಷೇತ್ರ ಇಂದು ಅವಗಣನೆಗೆ ಒಳಗಾಗಿದೆ. ಶ್ರೀಮಠದ ಮೂಲಚೈತನ್ಯ ಇಲ್ಲಿದೆ. ರಾಮಾದಿ ವಿಗ್ರಹಗಳು ಶಂಕರರ ಕೈಗೆ ಬಂದ ಬಳಿಕ ಇದರ ಪೂಜಾಕೈಂಕರ್ಯ ಮತ್ತು ಸಮಾಜೋದ್ಧಾರಕ್ಕಾಗಿ ಮಠ ಸ್ಥಾಪನೆ ಮಾಡುವ ನಿರ್ಧಾರ ಕೈಗೊಂಡ ಪುಣ್ಯಧಾಮ ಇದು ಎಂದು ಬಣ್ಣಿಸಿದರು. ಶ್ರೀಮಠದ ಶಿಷ್ಯಭಕ್ತರು ವರದೇಶ್ವರನ ಸೇವೆಯನ್ನು ಹೆಚ್ಚು ಹೆಚ್ಚು ಮಾಡುವಂತಾಗಬೇಕು ಎಂದು ಆಶಿಸಿದರು. ವರದೇಶ್ವರ ದೇವಾಲಯದ ಪ್ರಾಚೀನ ಇತಿಹಾಸ ಮತ್ತು ಮಹತಿಯನ್ನು ದತ್ತಾತ್ರೇಯ ನಾರಾಯಣ ಹಿರೇಗಂಗೆ ನೆರವೇರಿಸಿದರು.
Kalahamsa Infotech private limitedಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ತುಲಾಭಾರ ಸೇವೆಯ ನೇತೃತ್ವ ವಹಿಸಿದ್ದ ವಿ.ಡಿ.ಭಟ್, ಮೂರೂರು ರಾಜಾರಾಂ ಭಟ್ಟ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ವ್ಯವಸ್ಥಾಪಕ ಪ್ರಮೋದ್ ಮುಡಾರೆ, ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ಶ್ರೀಶ ಶಾಸ್ತ್ರಿ, ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್ ಟಿ.ಜಿ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಹೊನ್ನಾವರ ಮಂಡಲ ಅಧ್ಯಕ್ಷ ಆರ್.ಜಿ.ಹೆಗಡೆ ಹೊಸಾಕುಳಿ, ಕುಮಟಾ ಮಂಡಲದ ಅಧ್ಯಕ್ಷ ಸುಬ್ರಾಯ ಭಟ್ಟ ಮತ್ತಿತರರು ಉಪಸ್ಥಿತರಿದ್ದರು. ಪ್ರಶಾಂತ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaweshwara shriUttara Kannadaಗೋಕರ್ಣಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಮೀಜಿ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತಕ್ಕೆ ಬಹುದೊಡ್ಡ ಅಪಾಯ ಕಾದಿದೆ | ಸ್ವಾತಂತ್ರೋತ್ಸವದ ವೇಳೆ ಭಂಡಾರಕೇರಿ ಶ್ರೀಗಳು ಹೀಗೆ ಹೇಳಿದ್ದೇಕೆ?

Next Post

ದೇಶದ ವಿವಿಧ ಭಾಗಗಳಲ್ಲಿನ ವೈವಿಧ್ಯತೆಯೇ ನಮ್ಮ ಶಕ್ತಿ: ಪ್ರೊ. ಶರತ್ ಅನಂತಮೂರ್ತಿ

kalpa News

kalpa News

Next Post
ದೇಶದ ವಿವಿಧ ಭಾಗಗಳಲ್ಲಿನ ವೈವಿಧ್ಯತೆಯೇ ನಮ್ಮ ಶಕ್ತಿ: ಪ್ರೊ. ಶರತ್ ಅನಂತಮೂರ್ತಿ

ದೇಶದ ವಿವಿಧ ಭಾಗಗಳಲ್ಲಿನ ವೈವಿಧ್ಯತೆಯೇ ನಮ್ಮ ಶಕ್ತಿ: ಪ್ರೊ. ಶರತ್ ಅನಂತಮೂರ್ತಿ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!