ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಎಲ್ಲ ಗ್ರಹಗಳಿಂದ ಬರುವ ಎಲ್ಲ ದೋಷಗಳನ್ನು ಒಬ್ಬ ಗುರು ಪರಿಹಾರ ಮಾಡಬಲ್ಲ. ಗುರುವಿನ ದೃಷ್ಟಿಮಾತ್ರದಿಂದಲೇ ಎಲ್ಲ ದೋಷಗಳು ಪರಿಹಾರವಾಗಬಲ್ಲವು. ಗುರುವಿನ ಯೋಗ್ಯತೆಯನ್ನು ಜ್ಯೋತಿಷ ಉತ್ತಮವಾಗಿ ನಿರೂಪಿಸಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.
ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 43ನೇ ದಿನವಾದ ಭಾನುವಾರ ‘ಕಾಲ’ ಪ್ರವಚನ ಸರಣಿಯಲ್ಲಿ ಆಶೀರ್ವಚನ ಅನುಗ್ರಹಿಸಿದರು. ಗ್ರಹಗಳ ಬಲ ಹೆಚ್ಚಿದಂತೆ ಫಲ ಹೆಚ್ಚು. ಬಲ ಕಡಿಮೆಯಾದಾಗ ದುಷ್ಫಲಗಳನ್ನು ನೀಡುತ್ತವೆ. ದೋಷವನ್ನು ಪರಿಹರಿಸುವ ವಿಚಾರದಲ್ಲಿ ಗುರುವಿಗೆ ಇರುವ ಬಲ ಇತರ ಯಾವ ಗ್ರಹಗಳಿಗೂ ಇಲ್ಲ. ಬುಧನಿಗೆ ಆ ಶಕ್ತಿಯ ಕಾಲುಭಾಗ ಹಾಗೂ ಶುಕ್ರನಿಗೆ ಅರ್ಧಭಾಗದಷ್ಟಿದೆ ಎಂದು ವಿವರಿಸಿದರು.

Also read: ದರ್ಶನ್ ಅಂಡ್ ಗ್ಯಾಂಗ್ ಕುಣಿಕೆ ಮತ್ತಷ್ಟು ಬಿಗಿ? ಕಮಿಷನರ್ ದಯಾನಂದ್ ಕೊಟ್ಟ ಸುಳಿವೇನು?
ಹನ್ನೆರಡನೇ ಮನೆಯಲ್ಲಿ ಅಥವ ಎಂಟನೇ ಮನೆಯಲ್ಲಿ ಗುರು ಇದ್ದರೆ, ಭೌತಿಕ ಬದುಕು ಅಷ್ಟು ಒಳ್ಳೆಯದಲ್ಲದಿರಬಹುದು. ಆದರೆ ಹನ್ನೆರಡನೇ ಮನೆಯ ಗುರು ಮುಕ್ತಿಕಾರಕ. ಹನ್ನೊಂದನೇ ಮನೆಯಲ್ಲಿ ಗುರು ಅತ್ಯಂತ ಉತ್ತಮ ಫಲವನ್ನು ನೀಡುತ್ತಾನೆ. ಆಧ್ಯಾತ್ಮಿಕ, ಪಾರಮಾರ್ಥಿಕ ದೃಷ್ಟಿಯಿಂದ ಹನ್ನೆರಡನೇ ಮನೆಯ ಗುರು ಶ್ರೇಷ್ಠ ಎಂದರು.

ಅಖಿಲ ಹವ್ಯಕ ಮಹಾಸಭಾ ವತಿಯಿಂದ ನಿರ್ದೇಶಕ ಆರ್.ಜಿ.ಹೆಗಡೆ ಹೊಸಾಕುಳಿ ಭಾನುವಾರ ಸರ್ವಸೇವೆ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ವೇಣುವಿಘ್ನೇಶ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು. ಭಾರತೀ ಪ್ರಕಾಶನ ಹೊರತಂದಿರುವ ಪ್ರಾಚೀನ ಭಾರತದ ವೈಜ್ಞಾನಿಕ ಸಾಧನೆಗಳು, ನಿತ್ಯಾರಾಧನೆ ಮತ್ತು ಶ್ರೀರಾಮ ಕರ್ಣಾಮೃತ ಕೃತಿಗಳನ್ನು ಎಂ.ಆರ್.ಹೆಗಡೆ ಮತ್ತು ಬಿ.ಕೆ.ಹೆಗಡೆಯವರು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಭಾರತೀಪ್ರಕಾಶನದ ಜಾಲತಾಣ ಅನಾವರಣವನ್ನು ಶ್ರೀಪರಿವಾರದ ಸದಸ್ಯರು ನೆರವೇರಿಸಿದರು. 25ರ ಸಂಭ್ರಮದಲ್ಲಿರುವ ಭಾರತೀಪ್ರಕಾಶನದ ನೂತನ ಲಾಂಛನದ ಅನಾವರಣವೂ ಈ ಸಂದರ್ಭದಲ್ಲಿ ನಡೆಯಿತು.
ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ಕೋಶಾಧ್ಯಕ್ಷ ಸುಧಾಕರ ಬಡಗಣಿ, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶಾಸ್ತ್ರಿಗಳಾದ ಶ್ರೀಶ ಶಾಸ್ತ್ರಿ ಉಪಸ್ಥಿತರಿದ್ದರು. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post