No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಉತ್ತಮ ಜೀವನಕ್ಕಾಗಿ ಜ್ಯೋತಿಷ್ಯದ ಮೂಲತತ್ವದ ಅರಿವು ಅಗತ್ಯ: ರಾಘವೇಶ್ವರ ಶ್ರೀ

kalpa News by kalpa News
September 4, 2024
in ಉತ್ತರ ಕನ್ನಡ
0
ಉತ್ತಮ ಜೀವನಕ್ಕಾಗಿ ಜ್ಯೋತಿಷ್ಯದ ಮೂಲತತ್ವದ ಅರಿವು ಅಗತ್ಯ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಜ್ಯೋತಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಜೀವನದ ಎಲ್ಲ ಹಂತಗಳೂ ನಮಗೆ ಇದು ಪ್ರಯೋಜನಕ್ಕೆ ಬರುತ್ತದೆ. ಆದ್ದರಿಂದ ಒಳ್ಳೆಯ ಜೀವನ ಸಾಗಿಸಬೇಕಾದರೆ ಜ್ಯೋತಿಷ್ಯದ ಮೂಲತತ್ವಗಳನ್ನು ಅರಿತುಕೊಳ್ಳುವುದು ಅಗತ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ಕೈಗೊಂಡಿರುವ ಶ್ರೀಗಳು 45ನೇ ದಿನವಾದ ಮಂಗಳವಾರ ಕಾಲ ಪ್ರವಚನ ಸರಣಿ ಮುಂದುವರಿಸಿದ ಶ್ರೀಗಳು, ನಮ್ಮ ಪೂರ್ವಜರಲ್ಲಿ ಗ್ರಹಗತಿಗಳ ಪ್ರಜ್ಞೆ ಸದಾ ಇತ್ತು. ಈ ಪ್ರಜ್ಞೆ ಇದ್ದರೆ, ಪ್ರತಿ ಹಂತದಲ್ಲಿ ಅದು ನಮ್ಮ ನೆರವಿಗೆ ಬರುತ್ತದೆ. ಇಂಥ ಅಪೂರ್ವ ಶಾಸ್ತ್ರದ ತಲಸ್ಪರ್ಶಿಯಾಗಿ ಅಧ್ಯಯನ ಮಾಡಬೇಕು ಮತ್ತು ತಲಸ್ಪರ್ಶಿಯಾಗಿ ಅಗತ್ಯಕ್ಕೆ ತಕ್ಕಂತೆ ಬಳಸುವ ಜ್ಞಾನ ನಮಗೆ ಬೇಕು ಎಂದು ಹೇಳಿದರು.
ಹುಟ್ಟುವಾಗ ಯಾವ ರಾಶಿ ಪೂರ್ವದಲ್ಲಿ ಉದಯವಾಗುತ್ತಿತ್ತೋ ಅದು ಆ ವ್ಯಕ್ತಿಯ ಜಾತಕದ ಲಗ್ನ ಎನ್ನುತ್ತೇವೆ. ಆದರೆ ಪ್ರಶ್ನಚಿಂತನೆಯಲ್ಲಿ ಹಲವು ಬಗೆಯಲ್ಲಿ ಲಗ್ನವನ್ನು ನಿರ್ಧರಿಸಬಹುದು. ಉದಾಹರಣೆಗೆ ತತ್ಕಾಲ ಲಗ್ನ, ಲಗ್ನಾಂಶ, ಚಂದ್ರನಿರುವ ರಾಶಿ, ಪ್ರಶ್ನೆ ಬಂದ ವ್ಯಕ್ತಿಯ ನಿಲುವಿನಿಂದ, ಸೃಷ್ಟಾಂಗ, ಅಕ್ಷರದಿಂದಲೂ ಲಗ್ನವನ್ನು ಕಂಡುಹಿಡಿಯಬಹುದು. ತಾಂಬೂಲ, ಕವಡೆ, ಶಿಶುಹಸ್ತ ವಿಧಾನದಿಂದಲೂ ಲಗ್ನ ತಿಳಿಯಬಹುದು. ಮೈಯೆಲ್ಲಾ ಕಣ್ಣಾಗಿದ್ದು, ಕಿವಿಯಾಗಿದ್ದು ಸೂಕ್ಷ್ಮವಾಗಿ ಕೇಳಿಸಿಕೊಂಡಾಗ ಇದು ಸುಲಭವಾಗುತ್ತದೆ ಎಂದು ವಿವರಿಸಿದರು.

Also read: ಅಮೆರಿಕ | ಟೆಕ್ಸಾಸ್‌ನಲ್ಲಿ ಭೀಕರ ಅಪಘಾತ | ನಾಲ್ವರು ಭಾರತೀಯರು ಸಾವು

ನಾವಿರುವ ಸ್ಥಳವೇ ಒಂದು ರಾಶಿಚಕ್ರ; ಇದನ್ನು ಭೂಮಿಚಕ್ರ ಎಂದೂ ಕರೆಯುತ್ತಾರೆ. ದೈವಜ್ಞರ ಸುತ್ತ ಗ್ರಹಮಂಡಲವೇ ಇರುತ್ತದೆ. ರಾಶಿಚಕ್ರದ ಯಾವ ಭಾಗದಿಂದ ಒಂದು ಪ್ರಶ್ನೆ ಬಂದಿದೆ ಎಂದು ತಿಳಿದುಕೊಂಡರೆ ಆ ಪ್ರಶ್ನೆಯನ್ನು ವಿಶ್ಲೇಷಿಸಬಹುದು. ಪ್ರಶ್ನೆ ಬಂದ ಸ್ಥಳವನ್ನು ಲಗ್ನ ಎಂದು ತಿಳಿಯಬೇಕು ಎಂದರು.

ಯಾವುದೇ ಪ್ರಶ್ನೆಗಳು ಉದ್ಭವಿಸಿದರೆ, ಆ ಕಾಲದ ಗ್ರಹಸ್ಥಿತಿಯಿಂದ ಇದಕ್ಕೆ ಉತ್ತರ ಲಭಿಸುತ್ತದೆ. ಕ್ಷಿಪ್ರಫಲ ಚಿಂತನೆಗೆ, ಸೀಮಿತ, ಸಂಕ್ಷಿಪ್ತ ಫಲಕ್ಕೆ ಇದು ಸೂಕ್ತ. ಇದು ಪ್ರಕೃತಿ, ಆ ಕಾಲಘಟ್ಟದ ಗ್ರಹಸ್ಥಿತಿ, ಇದರಲ್ಲಿ ಬದಲಾವಣೆಯಾಗದು ಎಂದು ವಿಶ್ಲೇಷಿಸಿದರು.

“ಶಾಪ ಎನ್ನುವುದು ಒಂದು ಆಯುಧ. ಬಿಲ್ಲು-ಬಾಣ ಅಥವಾ ಯಾವುದೇ ಶಸ್ತ್ರಾಸ್ತ್ರಗಳಿಲ್ಲದೇ ಒಂದು ವಾಗ್ಬಾಣವೇ ಈ ಕೆಲಸ ಮಾಡುತ್ತದೆ. ಶಾಪ ನಮ್ಮ ವಿರುದ್ಧ ಆಯುಧವಾಗಿ ಕೆಲಸ ಮಾಡುತ್ತದೆ. ಎಂಟನೇ ಭಾವದ ಅಧಿಪತಿ, ಆರನೇ ಭಾವದ ಜತೆ ಸಂಬಂಧ ಬೆಳೆಸಿದಾಗ ಶಾಪ ಘನಘೋರವಾಗುತ್ತದೆ” ಎಂದು ವಿಶ್ಲೇಷಿಸಿದರು.

ನವಾಂಶದಲ್ಲಿ ಅಷ್ಟಮಾಧಿಪತಿ ಮತ್ತು ಪಂಚಮಾಧಿಪತಿಗಳ ಸಂಗಮವಾದರೆ ಮನೋವ್ಯಾಧಿಗೆ ಕಾರಣವಾಗುತ್ತದೆ. ಅಂತೆಯೇ ಪರಸ್ಪರರ ದೃಷ್ಟಿಯಿಂದ ಕೂಡಾ ಇಂಥ ಮನೋರೋಗ ಬರುತ್ತದೆ. ಷಷ್ಠಭಾವ, ಭಾವಾಧಿಪತಿ, ದೃಷ್ಟಿ, ಭಾವಕಾರಣ ಗ್ರಹಗಳ ಚಿಂತನೆ ಮಾಡಿದರೆ ಸಮರ್ಪಕವಾಗಿ ವಿಶ್ಲೇಷಿಸಬಹುದು ಎಂದರು.

https://kalpa.news/wp-content/uploads/2024/04/VID-20240426-WA0008.mp4

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಂದ್ರಭಾರತೀಮಹಾಸ್ವಾಮೀಜಿಯವರ ಜೀವನ ಸಾಧನೆಗಳ ಅನಾವರಣ ಇಂದು ನಡೆದಿದೆ. 32ನೇ ಗುರುಗಳ ಕಾಲದಲ್ಲಿ ಮಠ ಅತ್ಯುನ್ನತ ಮಟ್ಟ ತಲುಪಿತ್ತು. ಶಿಷ್ಯರಲ್ಲದವರೂ, ಬ್ರಿಟಿಷರು ಕೂಡಾ ಪರಮಪೂಜ್ಯ ರಾಘವೇಂದ್ರ ಭಾರತೀಸ್ವಾಮಿಗಳನ್ನು ರಾಜಮರ್ಯಾದೆಯಿಂದ ಗೌರವಿಸಿದ್ದರು. ಅಷ್ಟರ ಮಟ್ಟಿಗೆ ಮಠವನ್ನು, ಧರ್ಮವನ್ನು ಅತ್ಯುನ್ನತ ಸ್ಥಿತಿಗೆ ಒಯ್ದವರು. ಹಿರಿಯ ದೈವಜ್ಞರಾದ ಮಿತ್ತೂರು ಕೇಶವ ಭಟ್ಟರು ಅನಾವರಣ ನಡೆದಿರುವುದು ಅತ್ಯಂತ ಅರ್ಥಪೂರ್ಣ ಎಂದು ಹೇಳಿದರು.

ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ, ಮಾಜಿ ಗೃಹ ಸಚಿವ ಅರಗದ ಜ್ಞಾನೇಂದ್ರ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ವಿವಿವಿ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಶ್ರೀಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪು, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಅರವಿಂದ ಬಂಗಲಗಲ್ಲು, ಶ್ರೀಶ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು. ಸುಧನ್ವ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaveshwara shriUttara Kannadaಗೋಕರ್ಣಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಮೆರಿಕ | ಟೆಕ್ಸಾಸ್‌ನಲ್ಲಿ ಭೀಕರ ಅಪಘಾತ | ನಾಲ್ವರು ಭಾರತೀಯರು ಸಾವು

Next Post

ಕೊಪ್ಪಳ: ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ವಿಚಾರಸಂಕಿರಣ ಸಂಪನ್ನ

kalpa News

kalpa News

Next Post
ಕೊಪ್ಪಳ: ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ವಿಚಾರಸಂಕಿರಣ ಸಂಪನ್ನ

ಕೊಪ್ಪಳ: ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ವಿಚಾರಸಂಕಿರಣ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL