ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ, ರಾಮು ಫಿಲಂಸ್ ಲಾಂಛನದಲ್ಲಿ ರಾಮು ಅವರು ನಿರ್ಮಿಸಿರುವ ‘99‘ ಚಿತ್ರ ಮೇ 1ರ ನಾಳೆ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.
ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರವನ್ನು ಪ್ರೀತಂ ಗುಬ್ಬಿ ನಿರ್ದೇಶಿಸಿದ್ದಾರೆ. ಜಾಕಿ ಭಾವನ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಹೇಮಂತ್, ಸಮೀಕ್ಷ ಮುಂತಾದವರು ಅಭಿನಯಿಸಿದ್ದಾರೆ.
ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಇದು ಅವರ ಸಂಗೀತ ನಿರ್ದೇಶನದ 100ನೆಯ ಚಿತ್ರ. ಉಳಿದಂತೆ ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ. ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.
Discussion about this post