ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗ #8thPayCommission ರಚಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಈ ಕುರಿತಂತೆ ಮಾತನಾಡಿರುವ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 7 ನೇ ವೇತನ ಆಯೋಗದ #7thPayCommission ಅವಧಿ 2026 ರಲ್ಲಿ ಕೊನೆಗೊಳ್ಳಲಿದೆ.
Also Read>> ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದ ಯುವಕ ಸಾವು
8ನೇ ವೇತನ ಆಯೋವನ್ನು ರಚಿಸಲು ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ನೇತೃತ್ವದಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನ ಮಂತ್ರಿಗಳು ಕೇಂದ್ರ ಸರ್ಕಾರಿ ನೌಕರರಿಗೆ 8 ನೇ ಕೇಂದ್ರ ವೇತನ ಆಯೋಗವನ್ನು ಅನುಮೋದಿಸಿದ್ದಾರೆ. ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಶೀಘ್ರದಲ್ಲೇ ನೇಮಿಸಲಾಗುವುದು ಎಂದವರು ಹೇಳಿದರು.

2025 ರಲ್ಲಿ ಹೊಸ ವೇತನ ಆಯೋಗವನ್ನು ಸ್ಥಾಪಿಸುವುದರಿಂದ ಏಳನೇ ವೇತನ ಸಮಿತಿಯ ಅವಧಿ ಮುಗಿಯುವ ಮೊದಲೇ ಅದರ ಶಿಫಾರಸುಗಳನ್ನು ಸ್ವೀಕರಿಸಲಾಗುತ್ತದೆ ಎಂದು ಸಚಿವರು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ ಪಾಲುದಾರರೊಂದಿಗೆ ಸಮಾಲೋಚನೆಗಳನ್ನು ನಡೆಸಲಾಗುವುದು ಎಂದು ಸಚಿವರು ಹೇಳಿದರು. 
7 ನೇ ವೇತನ ಆಯೋಗವನ್ನು 2014 ರಲ್ಲಿ ರಚಿಸಲಾಯಿತು ಮತ್ತು ಅದರ ಶಿಫಾರಸುಗಳನ್ನು ಜನವರಿ 1, 2016 ರಂದು ಜಾರಿಗೆ ತರಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post