ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿಗಳ ಉಪಯೋಗಕ್ಕಾಗಿ ಫೆ.24-25ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಕುರಿತಂತೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಮೊದಲ ಬಾರಿಗೆ ಜಿಲ್ಲೆಯಲ್ಲಿ ಬೃಹತ್ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಮೇಳದಲ್ಲಿ ಖಾಸಗಿ ಕ್ಷೇತ್ರದ 120ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ. ಉತ್ಪಾದನಾ ವಲಯ ಮತ್ತು ಅಟೋ ಮೊಬೈಲ್ ಕ್ಷೇತ್ರದ ಕಂಪೆನಿಗಳನ್ನು ಆಹ್ವಾನಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಮೇಳದಲ್ಲಿ ಆಯ್ಕೆ ಮಾಡಲಾಗುವುದು ಎಂದಿದ್ದಾರೆ.
ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರಿಗೆ ಅನುಕೂಲವಾಗುವಂತೆ ವೆಬ್‌ಸೈಟ್ https://shimogaudyogamela.in ಸಿದ್ಧಪಡಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಸಂದರ್ಶನಕ್ಕೆ ಸಂಬಂಧಿಸಿದ ತರಬೇತಿಯನ್ನು ಪಡೆದುಕೊಳ್ಳಲು ಹಾಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಲು ವೆಬ್’ಸೈಟ್‌ನಲ್ಲಿ ನೇರವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗ ಮೇಳದ ಸಂಪೂರ್ಣ ವಿವರ ಇದರಲ್ಲಿ ಲಭ್ಯವಿರಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8762778408, 9448787752, 7892548980, 08182-255293 ಸಂಪರ್ಕಿಸಬಹುದಾಗಿದ್ದು, ಪ್ರವೇಶ ಉಚಿತವಾಗಿರುತ್ತದೆ.
ಯಾರೆಲ್ಲಾ ಭಾಗವಹಿಸಬಹುದು?
ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವೀಧರರು
18ರಿಂದ 40ವರ್ಷ ವಯೋಮಿತಿಯವರು ಭಾಗವಹಿಸಬಹುದಾಗಿದೆ.
Get in Touch With Us info@kalpa.news Whatsapp: 9481252093
Discussion about this post