ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.
ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಂಡಿದೆ.
ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25, 2025 ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ.

ವಾಪಸ್ ಬರುವಾಗ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 26, 2025 ರಂದು ಬೆಳಿಗ್ಗೆ 08:15 ಗಂಟೆಗೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 04:50 ಗಂಟೆಗೆ ಯಶವಂತಪುರ ತಲುಪಲಿದೆ.

ಈ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ 01 ಎಸಿ ಟು ಟೈರ್, 02 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post