ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಶಿಕ್ಷಕರ ಕೊರತೆ ನೀಗಿಸಲು ಶೀಘ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 2200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಕರು ಹಾಗೂ 100 ವಿಶೇಷ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















