No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗುಡ್ ನ್ಯೂಸ್! ಪುನಾರಂಭವಾಗಲಿದೆ ಶಿವಮೊಗ್ಗ-ತಿರುಪತಿ-ಚೆನ್ನೈ ಸ್ಪೆಷಲ್ ರೈಲು

ಎಂದಿನಿಂದ ಆರಂಭ? ಬದಲಾಗಿರುವ ನೂತನ ಮಾರ್ಗ ಯಾವುದು? ಇಲ್ಲಿದೆ ಮಾಹಿತಿ

kalpa News by kalpa News
April 8, 2022
in ಶಿವಮೊಗ್ಗ
0
ವಲಸೆ ಕಾರ್ಮಿಕರಿಗಾಗಿ ಜೂ.24ರಂದು ಶ್ರಮಿಕ್ ರೈಲು: ಡಿಸಿ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಶಿವಮೊಗ್ಗ-ತಿರುಪತಿ-ಚೆನ್ನೈ ಎಕ್ಸ್’ಪ್ರೆಸ್ ರೈಲು ಈಗ ಮತ್ತೆ ಪುನಾರಂಭವಾಗಲಿದೆ.

ಸಂಸದ ಬಿ.ವೈ. ರಾಘವೇಂದ್ರ ರವರ ಪ್ರಯತ್ನದ ಫಲವಾಗಿ ಶಿವಮೊಗ್ಗ -ರೇಣಿಗುಂಟ(ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಮದ್ರಾಸ್ ಎಕ್ಸಪ್ರೆಸ್ ವಾರಕ್ಕೆ ಎರಡು ಭಾರಿ ಸಂಚರಿಸುವ ರೈಲು ಸೇವೆಗಳನ್ನು ಆರಂಭಿಸಲಾಗಿತ್ತು. ಕೋವಿಡ್ ಸಾಂಕ್ರಾಂಮಿಕ ರೋಗ ಉಲ್ಬಣಗೊಂಡ ಹಿನ್ನೆಲೆಯಲ್ಲಿ ದೇಶದಾದ್ಯಂತ ರೈಲು ಸೇವೆಗಳನ್ನು ನಿಲುಗಡೆ ಮಾಡಿದ ಸಂದರ್ಭದಲ್ಲಿ ಈ ಎರಡು ರೈಲು ಸೇವೆಗಳನ್ನು ಸಹ ರೈಲ್ವೆ ಇಲಾಖೆಯಿಂದ ಹಿಂಪಡೆಯಲಾಗಿತ್ತು.

ಈ ಹಿಂದೆ ಶಿವಮೊಗ್ಗದಿಂದ ತಿರುಪತಿಗೆ ಹೊರಡುವ ರೈಲು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು ರಾತ್ರಿ 8 ಗಂಟೆಗೆ ರೇಣಿಗುಂಟವನ್ನು ತಲುಪಿ ಅರ್ಧ ಗಂಟೆಯ ನಂತರ ಕೂಡಲೇ ಶಿವಮೊಗ್ಗಕ್ಕೆ ಮರು ಪ್ರಯಾಣವನ್ನು ಆರಂಭಿಸುತ್ತಿತ್ತು. ಇದರಿಂದಾಗಿ ಮಲೆನಾಡಿನ ಭಾಗದ ಯಾತ್ರಾರ್ಥಿಗಳಿಗೆ ಈ ರೈಲಿನಿಂದ ಹೆಚ್ಚಿನ ಅನುಕೂಲವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ-ಬೆಂಗಳೂರು ಮದ್ರಾಸ್ ಎಕ್ಸಪ್ರೆಸ್ ಹಾಗೂ ಶಿವಮೊಗ್ಗ-ರೇಣಿಗುಂಟ(ತಿರುಪತಿ) ರೈಲುಗಳನ್ನು ಒಗ್ಗೂಡಿಸಿ ಶಿವಮೊಗ್ಗದಿಂದ ತಿರುಪತಿ ಹಾಗೂ ಮದ್ರಾಸ್’ಗೆ ತೆರಳುವ ಯಾತ್ರಾರ್ಥಿಗಳು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲಿನ ಸಮಯ ಹಾಗೂ ಮಾರ್ಗವನ್ನು ಬದಲಿಸಿ ಶಿವಮೊಗ್ಗ-ರೇಣಿಗುಂಟ-ಮದ್ರಾಸ್ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಆರಂಭಿಸುವಂತೆ ಸಂಸದರು ರೈಲ್ವೆ ಸಚಿವರನ್ನು ಹಲವಾರು ಬಾರಿ ಒತ್ತಾಯಿಸಿದ್ದರು.

ಸಂಸದರ ಪ್ರಯತ್ನದ ಫಲವಾಗಿ ಎಪ್ರಿಲ್ 17ರಿಂದ ಶಿವಮೊಗ್ಗ-ಮದ್ರಾಸ್-ಶಿವಮೊಗ್ಗ (ವಯಾ-ರೇಣಿಗುಂಟ (ತಿರುಪತಿ) ಎಕ್ಸಪ್ರೆಸ್ ರೈಲು ಸೇವೆಯು ಆರಂಭಗೊಳ್ಳುತ್ತಿದೆ.

ವಾರಕ್ಕೆ ಎಷ್ಟು ದಿನ ಸಂಚಾರ?
ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದ್ರಾಸ್’ನಿಂದ ಸೋಮವಾರ ಮತ್ತು ಬುಧವಾರಗಳಂದು ಈ ರೈಲು ಸಂಚರಿಸಲಿದೆ.
ಯಾವ ಸಮಯಕ್ಕೆ ಸಂಚರಿಸಲಿದೆ?
ವಾರಕ್ಕೆ ಎರಡು ದಿನ ಸಂಚರಿಸುವ ಈ ರೈಲು ಸೇವೆಯು ಶಿವಮೊಗ್ಗದಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8.20 ಗಂಟೆಗೆ ರೇಣಿಗುಂಟವನ್ನು ಹಾಗೂ 11.10 ಕ್ಕೆ ಮದ್ರಾಸ್ ತಲುಪುತ್ತದೆ, ಅದೇ ದಿನ ಮದ್ರಾಸ್’ನಿಂದ ಸಂಜೆ 3.50ಕ್ಕೆ ಹೊರಡುವ ಈ ರೈಲು ರೇಣಿಗುಂಟಕ್ಕೆ ಸಂಜೆ 6.10ಕ್ಕೆ ತಲುಪಿ ಮರುದಿನ ಬೆಳಿಗ್ಗೆ 7.55ಕ್ಕೆ ಶಿವಮೊಗ್ಗವನ್ನು ತಲುಪಲಿದೆ.

ತಿರುಪತಿ ಯಾತ್ರಿಗಳ ಸಮಯ ಉಳಿತಾಯ
ಮಲೆನಾಡು, ಕರಾವಳಿ ಹಾಗೂ ಶಿವಮೊಗ್ಗ ಭಾಗದ ಜನರು ರೇಣಿಗುಂಟಕ್ಕೆ ಮುಂಜಾನೆ ತಲುಪಿ ಸಂಜೆಯ ವೇಳೆಗೆ ತಿರುಪತಿಯಲ್ಲಿ ದೇವರ ದರ್ಶನ ಪಡೆದು ಅದೇದಿನ ರಾತ್ರಿ ಶಿವಮೊಗ್ಗ ಮರುಪ್ರಯಾಣ ಆರಂಭಿಸಲು ಈ ಬದಲಾದ ಸಮಯ ನೆರವಾಗಲಿದೆ. ಈ ಮೊದಲಿನ ರೈಲು ಸೇವೆಯು ಶಿವಮೊಗ್ಗದಿಂದ ಮುಂಜಾನ ತನ್ನ ಪ್ರಯಾಣವನ್ನು ಆರಂಭಿಸುತ್ತಿರುವುದರಿಂದ ಶಿವಮೊಗ್ಗದಿಂದ ತಿರುಪತಿಗೆ ತೆರಳಲು ಬಯಸುತ್ತಿದ್ದ ಯಾತ್ರಾರ್ಥಿಗಳು ಇಡೀ ದಿನವನ್ನು ರೈಲಿನಲ್ಲಿ ಕಳೆಯ ಬೇಕಾಗಿತ್ತು. ಬದಲಾದ ಸಮಯದ ಈ ರೈಲು ಸೇವೆಯಿಂದ ರಾತ್ರಿಯ ಪ್ರಯಾಣದ ಮೂಲಕ ತಿರುಪತಿಯನ್ನು ತಲುಪಬಹುದಾಗಿದೆ.
ನೂತನ ಮಾರ್ಗ ಹೀಗಿದೆ
ಈ ರೈಲು ಸೇವೆಯಿಂದ ಮಲೆನಾಡಿನ ಜನತೆಯು ಚಿತ್ರದುರ್ಗ, ಬಳ್ಳಾರಿ, ಗುಂತಕಲ್ ಮೂಲಕ ರೇಣಿಗುಂಟ ಹಾಗೂ ಮದರಾಸಿನೊಂದಿಗೆ ಸಂಪರ್ಕ ಹೊಂದಲು ಸಾಧ್ಯವಾಗಲಿದೆ.

ಈ ರೈಲು ಮಾರ್ಗದಲ್ಲಿ ಭದ್ರಾವತಿ, ತರೀಕೆರೆ, ಬೀರೂರು, ಅಜ್ಜಂಪುರ, ಹೊಸದುರ್ಗ, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಕೂರು, ರಾಯದುರ್ಗ, ಬಳ್ಳಾರಿ, ಗುಂತಕಲ್, ತಾಡಪತ್ರಿ, ಗುತ್ತಿ, ಯರಗುಂಟ, ಕಡಪ, ರಾಯಪೇಟ, ರೇಣಿಗುಂಟ, ಅರಕೋಣಂ, ಪರಂಬೂರ್ ರೈಲು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ.
ಈ ರೈಲಿನ ಸೇವೆಯ ಸದುಪಯೋಗವನ್ನು ಪಡೆದುಕೊಳ್ಳಲು ಸಂಸದರು ಶಿವಮೊಗ್ಗ ಹಾಗೂ ಮಲೆನಾಡಿನ ಜನತೆಯಲ್ಲಿ ಈ ಮೂಲಕ ಮನವಿ ಮಾಡಿಕೊಂಡಿರುತ್ತಾರೆ.

ಈ ನೂತನ ರೈಲು ಸೇವೆಯನ್ನು ಆರಂಭಿಸಲು ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಕಟ ಪೂರ್ವ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಜಿಲ್ಲೆಯ ಶಾಸಕರುಗಳಿಗೆ ಸಂಸದರು ಧನ್ಯವಾದ ಅರ್ಪಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BellaryBENGALURUChennaiChitradurgaIndian railKannada News WebsiteLatest News KannadaReniguntaShimogaShivamoggaShivamogga NewsShivamogga Tirupati TrainTirupatiಚಿತ್ರದುರ್ಗಚೆನ್ನೈತಿರುಪತಿಬಳ್ಳಾರಿಬೆಂಗಳೂರುಮದ್ರಾಸ್ ಎಕ್ಸಪ್ರೆಸ್ರೇಣಿಗುಂಟಶಿವಮೊಗ್ಗ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೃಹಸಚಿವ ಆರಗ ಜ್ಞಾನೆಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ದೂರು ದಾಖಲು

Next Post

ಆರ್ಥಿಕತೆ ಸದೃಢತೆಗೆ ಆಹಾರ ತಂತ್ರಜ್ಞಾನ ಹಾಗೂ ಕೃಷಿ ಅಧ್ಯಯನ ಬಹಳ ಮುಖ್ಯ: ಡಾ. ರವಿಶಂಕರ್ ಗೋಕರೆ

kalpa News

kalpa News

Next Post
ಆರ್ಥಿಕತೆ ಸದೃಢತೆಗೆ ಆಹಾರ ತಂತ್ರಜ್ಞಾನ ಹಾಗೂ ಕೃಷಿ ಅಧ್ಯಯನ ಬಹಳ ಮುಖ್ಯ: ಡಾ. ರವಿಶಂಕರ್ ಗೋಕರೆ

ಆರ್ಥಿಕತೆ ಸದೃಢತೆಗೆ ಆಹಾರ ತಂತ್ರಜ್ಞಾನ ಹಾಗೂ ಕೃಷಿ ಅಧ್ಯಯನ ಬಹಳ ಮುಖ್ಯ: ಡಾ. ರವಿಶಂಕರ್ ಗೋಕರೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL