ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಸರಾ ಹಬ್ಬದ ವೇಳೆ ಪ್ರಯಾಣಿಕರ ಹೆಚ್ಚುವರಿ ಒತ್ತಡವನ್ನು ನಿರ್ವಹಿಸುವ ಸಲುವಾಗಿ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರವನ್ನು ಘೋಷಿಸಲಾಗಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್’ಗಳನ್ನು ಪೂರ್ಣಗೊಳಿಸಲಿದೆ.
ಯಾವತ್ತು ವಿಶೇಷ ರೈಲು ಸಂಚಾರ?
06587 ಸಂಖ್ಯೆಯ ಯಶವಂತಪುರ-ತಾಳಗುಪ್ಪ ಎಕ್ಸ್’ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 19, 26 ಮತ್ತು ಅಕ್ಟೋಬರ್ 3 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ.
ಮತ್ತೊಂದೆಡೆ, ರೈಲು ಸಂಖ್ಯೆ 06588 ತಾಳಗುಪ್ಪ-ಯಶವಂತಪುರ ಎಕ್ಸ್’ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 20, 27 ಮತ್ತು ಅಕ್ಟೋಬರ್ 4 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರA ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಎಷ್ಟು ಬೋಗಿ ಇರಲಿವೆ?
ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್, ಹತ್ತು ಸ್ಲೀಪರ್ ಕ್ಲಾಸ್, ಐದು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್’ಗಳು ಇರಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post