ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ನವೆಂಬರ್ 3ರಂದು ವೇತನ ಸಹಿತ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯಪಾಲರ ಆದೇಶದಂತೆ ಸರ್ಕಾರದ ಅಧೀನ ಕಾರ್ಯದರ್ಶಿ(ರಾಜ್ಯ ಶಿಷ್ಟಾಚಾರ-1)ಯವರು ಪ್ರಜಾಪ್ರತಿನಿಧಿ ಕಾಯ್ದೆ 1954ರ ಕಲಂ 135ಬಿ ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದು, ಅದರಂತೆ ಉಪಚುನಾವಣೆ ನಡೆಯುವ ಕ್ಷೇತ್ರವ್ಯಾಪ್ತಿಯಲ್ಲಿ ಅಂದು ಸರ್ಕಾರಿ ರಜೆಯಿರುತ್ತದೆ.
ಬಳ್ಳಾರಿ, ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರ ಶನಿವಾರ ಉಪಚುನಾವಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಅಂದು ಉಪಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳೂ ಸೇರಿದಂತೆ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಇರುತ್ತದೆ. ಅಲ್ಲದೇ, ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಾಗಿದ್ದು, ಕ್ಷೇತ್ರದಿಂದ ಹೊರಗೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೂ ಸಹ ರಜೆ ನೀಡುವಂತೆ ಆದೇಶಿಸಲಾಗಿದೆ.
Discussion about this post