ಬೆಂಗಳೂರು: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮಾರ್ಚ್ 31ರವರೆಗೂ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರ 144 ಸೆಕ್ಷನ್ ಜಾರಿ ಮಾಡಿದೆ. ಆದರೆ, ತುರ್ತು ಪರಿಸ್ಥಿತಿಯಲ್ಲಿಯೂ ಸಹ ಆದೇಶ ಉಲ್ಲಂಘಿಸುತ್ತಾ ಶೋಷಿಗಾಗಿ ರಸ್ತೆಯಲ್ಲಿ ತಿರುಗಾಡುತ್ತಿರುವ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ.
ಬೆಂಗಳೂರು, ಕಲಬುರಗಿ, ಚಿಕ್ಕಬಳ್ಳಾಪುರ, ಹುಬ್ಬಳ್ಳಿ, ಮಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಾ ಶೋಕಿ ಮಾಡುತ್ತಿದ್ದ ವಾಹನ ಸವಾರರಿಗೆ ಅದರಲ್ಲೂ ಪೋಲಿ ಯುವಕರಿಗೆ ಪೊಲೀಸರು ಸರಿಯಾಗಿಯೇ ಲಾಠಿ ಬೀಸಿದ್ದಾರೆ.
ಇನ್ನು, ಮೈಸೂರಿನಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಜನರು ಸೇರಿದ್ದು, ಇದನ್ನು ಚದುರಿಸಿ, ಮನೆಗಳಿಗೆ ಕಳುಹಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು.
Also Read
ಸರ್ಕಾರದ ಆದೇಶ ಉಲ್ಲಂಘಿಸಿ ಸುಖಾಸುಮ್ಮನೆ ರಸ್ತೆಯಲ್ಲಿ ಸುತ್ತಾಡಿದರೆ ಕ್ರಿಮಿನಲ್ ಕೇಸ್ ಗ್ಯಾರೆಂಟಿ
ಶಿವಮೊಗ್ಗದಲ್ಲೂ ಸಹ ಎಪಿಎಂಸಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಾರಸ್ತರು ಸೇರಿದ್ದು, ಕೊಳ್ಳಲು ಸಾರ್ವಜನಿಕರೂ ಸಹ ಗುಂಪು ಗುಂಪಾಗಿ ಸೇರಿದ್ದರು. ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ಪೊಲೀಸರು ಗುಂಪುಗೂಡಿದ್ದ ಜನರನ್ನು ಚದುರಿಸಿ, ಬೇಗ ಮನೆಗಳಿಗೆ ತೆರಳುವಂತೆ ಎಚ್ಚರಿಕೆ ನೀಡಿದರು.

















