ಬೆಂಗಳೂರು: ಮುಸಲ್ಮಾನರನ್ನು ಸಂತೃಪ್ತಿಪಡಿಸಿ, ಓಲೈಕೆಗಾಗಿ ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಿಡಿ ಕಾರಿದ್ದಾರೆ.
ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾವು ಟಿಪ್ಪು ಜಯಂತಿಯನ್ನು ವಿರೋಧಿಸುತ್ತೇವೆ. ರಾಜ್ಯದಲ್ಲಿ ಯಾರೂ ಈ ಆಚರಣೆಯನ್ನು ಒಪ್ಪುವುದಿಲ್ಲ. ಇಂತಹ ಟಿಪ್ಪು ಜಯಂತಿಯ ಆಚರಣೆಯನ್ನು ರಾಜ್ಯ ಸರ್ಕಾರ ತತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಶಬರಿಮಲೆ ದೇವಾಲಯಕ್ಕೆ ಎಲ್ಲ ವಯೋಮಾನದವರ ಪ್ರವೇಶದ ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶೇ.90ರಷ್ಟು ಮಹಿಳೆಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ, ನ್ಯಾಯಾಲಯಕ್ಕೆ ಮನವಿ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ನಮ್ಮ ಪಕ್ಷ ಸುಪ್ರೀಂ ತೀರ್ಪನ್ನು ವಿರೋಧಿಸುವುದಿಲ್ಲ. ಆದರೆ, ಜನರ ಧಾರ್ಮಿಕ ಭಾವನೆಗಳನ್ನು ನಾವು ಗೌರವಿಸಬೇಕು ಎಂದಿದ್ದಾರೆ.
More than 90% of women are protesting against it. It is high time, Kerala CM takes necessary action and approach the Supreme Court to stop entry of women to the temple. Our party is not opposing SC’s verdict but people’s emotions should be respected: BS Yeddyurappa,BJP #Karnataka pic.twitter.com/SmQguLQKnw
— ANI (@ANI) November 8, 2018
ಜನಾರ್ಧನ ರೆಡ್ಡಿ ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂಬುದು ನನಗೆ ಮಾಧ್ಯಮಗಳ ವರದಿಯಿಂದ ತಿಳಿದುಬಂದಿದೆ. ಅದಕ್ಕಿಂತ ಹೆಚ್ಚಾಗಿ ಯಾವುದೇ ವಿಶೇಷ ಮಾಹಿತಿ ಇಲ್ಲ. ತಪ್ಪಿತಸ್ಥರು ಯಾರೇ ಆಗಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.
Discussion about this post