ಹೈದರಾಬಾದ್: ತೆಲಂಗಾಣದಲ್ಲಿ ಅಸ್ಥಿತ್ವದಲ್ಲಿದ್ದ ತೆಲಂಗಾಣ ರಾಷ್ಟ್ರ ಸಮಿತಿಯ ಕೆ.ಸಿ. ರಾವ್ ನೇತೃತ್ವದ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ಅಲ್ಲಿನ ರಾಜ್ಯಪಾಲ ಇಎಸ್‌ಎಲ್ ನರಸಿಂಹನ್ ಆದೇಶ ಹೊರಡಿಸಿದ್ದಾರೆ.
ಸಿಎಂ ಕೆಸಿಆರ್ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ನಿರ್ಣಯ ಕೈಗೊಳ್ಳಲಾಯಿತು.
ಇದರಂತೆ ರಾಜ್ಯಪಾಲರನ್ನು ಭೇಟಿಯಾಗಿ ಶಿಫಾರಸ್ಸು ಪತ್ರ ಸಲ್ಲಿಸಿದ ಕೆಸಿಆರ್, ವಿಧಾನಸಭೆಯನ್ನು ವಜಾಗೊಳಿಸುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ತತಕ್ಷಣ ಕ್ರಮಕೈಗೊಂಡಿರುವ ರಾಜ್ಯಪಾಲ ನರಸಿಂಹನ್, ವಿಧಾನಸಭೆಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದು, ಮುಂದಿನ ಸೂಚನೆವರೆಗೂ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಕೆಸಿಆರ್ ಅವರಿಗೆ ಸೂಚಿಸಿದ್ದಾರೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಅವಧಿಗೂ ಮುನ್ನವೇ ಚುನಾವಣೆ ನಡೆಯುವ ಸಾಧ್ಯತೆ ಈಗ ಹೆಚ್ಚಾಗಿದೆ.
Discussion about this post