ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಗರಕ್ಕೆ ಭೇಟಿ ನೀಡಲಿದ್ದಾರೆ.
ಅಂದು ಮುಂಜಾನೆ 9.30ಕ್ಕೆ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣದಿಂದ ಹೊರಡಲಿರುವ ಅವರು, ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಇರುಕ್ಕಿ ಕ್ಯಾಂಪಸ್’ಗೆ ತೆರಳಿರುವ ಅವರು, ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
4.30ಕ್ಕೆ ಇರುವಕ್ಕಿಯಿಂದ ಹೊರಡಲಿರುವ ರಾಜ್ಯಪಾಲರು ಶಿವಮೊಗ್ಗದಿಂದ 5.10ಕ್ಕೆ ಹೊರಟು 8 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post