ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಎಲ್’ಪಿಜಿ ಸಿಲಿಂಡರ್ ಮೇಲೆ ರೂ.200 ಸಬ್ಸಿಡಿಯನ್ನು ಘೋಷಿಸಿರುವ ಕೇಂದ್ರ ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ವಿಧಿಸಿದೆ.ಈ ಕುರಿತಂತೆ ಟ್ವೀಟ್ ಮಾಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ಸಬ್ಸಿಡಿ ಲಭ್ಯವಾಗಲಿದ್ದು, ಆದರೆ ಈ ಸಬ್ಸಿಡಿ ವಿಚಾರಕ್ಕೆ ಷರತ್ತು ಕೂಡ ಹಾಕಲಾಗಿದೆ. ಈ ಸಬ್ಸಿಡಿಯನ್ನು ವಾರ್ಷಿಕವಾಗಿ 12 ಸಿಲಿಂಡರ್’ಗಳಿಗೆ ಮಾತ್ರ ನೀಡಲಾಗುವುದು ಎಂದಿದ್ದಾರೆ.
ಪ್ರಧಾನಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ವರ್ಷ ಪ್ರತಿ ಗ್ಯಾಸ್ ಸಿಲಿಂಡರ್’ಗೆ (12 ಸಿಲಿಂಡರ್’ಗಳವರೆಗೆ) 200 ರೂಪಾಯಿ ಸಬ್ಸಿಡಿ ನೀಡಲಾಗುತ್ತದೆ. ಇದು ನಮ್ಮ ತಾಯಿ ಮತ್ತು ಸಹೋದರಿಯರಿಗೆ ಸಹಾಯ ಮಾಡುತ್ತದೆ. ಇದು ಸುಮಾರು 6100 ಕೋಟಿ ವಾರ್ಷಿಕ ಆದಾಯದ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post