No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Sunday, November 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ CSR ಪಾಲುದಾರರು ಕೈಜೋಡಿಸಿ: ಸಚಿವ ಮಧು ಬಂಗಾರಪ್ಪ ಕರೆ

kalpa News by kalpa News
November 4, 2026
in News, ಬೆಂಗಳೂರು ನಗರ
0
Govt Schools development CSR partners Madhu Bangarappa
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | 

ಸರ್ಕಾರಿ ಶಾಲೆಗಳ (Government School) ಅಭಿವೃದ್ಧಿ ಹಾಗೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಪಾಲುದಾರರು, ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಉದ್ಯಮ ವಲಯದವರು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಮನವಿ ಮಾಡಿದರು.

ಬೆಂಗಳೂರಿನ (Bengaluru) ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ  ಪ್ರತಿನಿಧಿಗಳ ಸಭೆಯಲ್ಲಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಶಿಕ್ಷಣವೆಂಬುದು ಕೇವಲ ಮಗುವಿನ ಭವಿಷ್ಯ ರೂಪಿಸುವ ಸಾಧನವಲ್ಲ. ಅದು ಇಡೀ ಸಮಾಜ ಮತ್ತು ದೇಶದ ಭವಿಷ್ಯವನ್ನು ನಿರ್ಧರಿಸುವ ಶಕ್ತಿಯಾಗಿದೆ ಎಂದರು.

ಪ್ರತಿಯೊಂದು ಮಗುವಿಗೂ ಸಮಾನ ಅವಕಾಶ, ಗುಣಮಟ್ಟದ ಶಿಕ್ಷಣ ಹಾಗೂ ಉಜ್ವಲ ಭವಿಷ್ಯ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಗುರಿ ಸಾಧಿಸಲು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಖಾಸಗಿ ಸಂಸ್ಥೆಗಳು ಮತ್ತು ಕಾರ್ಪೊರೇಟ್ ವಲಯದ ಸಹಭಾಗಿತ್ವ ಅತ್ಯಗತ್ಯ ಎಂದು ತಿಳಿಸಿದರು.

Christ KingGovernment School: 1.12 ಕೋಟಿ ವಿದ್ಯಾರ್ಥಿಗಳಿಗೆ ಶಿಕ್ಷಣ

ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳ ಮೂಲಕ ಒಟ್ಟು 1.12 ಕೋಟಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿದೆ. ಪ್ರತಿಯೊಂದು ಮಗುವಿಗೂ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದರ ಜತೆಗೆ ಶಿಕ್ಷಣದಲ್ಲಿ ಸಮಾನತೆ ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ಕಳೆದ ಮೂರೂವರೆ ವರ್ಷಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯು ಹಲವು ಮಹತ್ವದ ಶೈಕ್ಷಣಿಕ ಸುಧಾರಣೆಗಳನ್ನು ಜಾರಿಗೊಳಿಸಿದೆ. ಇವು ಕೇವಲ ಆಡಳಿತಾತ್ಮಕ ಬದಲಾವಣೆಗಳಲ್ಲ. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ ಮತ್ತು ಭವಿಷ್ಯದ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಕೈಗೊಂಡ ಕ್ರಮಗಳಾಗಿವೆ ಎಂದು ವಿವರಿಸಿದರು.

ಸಂವಿಧಾನದ ಮೌಲ್ಯಗಳ ಪರಿಚಯಕ್ಕೆ ಆದ್ಯತೆ

ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಆಶಯಗಳು, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ.

ವೈಜ್ಞಾನಿಕ ದೃಷ್ಟಿಕೋನ, ಸತ್ಯಾಧಾರಿತ ಮಾಹಿತಿ ಹಾಗೂ ಸಮಾಜದ ಎಲ್ಲ ವರ್ಗಗಳನ್ನೂ ಒಳಗೊಳ್ಳುವ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿದೆ. ಮಕ್ಕಳ ಮೇಲಿನ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಶಾಲಾ ಬ್ಯಾಗ್‌ಗಳ ಹೊರೆಯನ್ನು ಶೇ.50ರಷ್ಟು ತಗ್ಗಿಸುವ ಕ್ರಮ ಕೈಗೊಳ್ಳಲಾಗಿದೆ. ಪಠ್ಯಪುಸ್ತಕಗಳನ್ನು ಎರಡು ಭಾಗಗಳಾಗಿ ವಿಂಗಡಿಸಿ, ಮೊದಲ ಮತ್ತು ಎರಡನೇ ಶೈಕ್ಷಣಿಕ ಮೌಲ್ಯಮಾಪನಕ್ಕೆ ಅನುಗುಣವಾಗಿ ವಿತರಿಸಲಾಗುತ್ತಿದೆ ಎಂದರು.

PES Shivamogga

SSLC, ಪಿಯುಸಿ ಫಲಿತಾಂಶದಲ್ಲಿ ದಾಖಲೆ

ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಮತ್ತು ಒತ್ತಡ ಕಡಿಮೆ ಮಾಡಿ ಕಲಿಕೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ SSLC ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. 2026-27ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳ ಉತ್ತಮ ಫಲಿತಾಂಶದ ಹಿನ್ನೆಲೆಯಲ್ಲಿ ಈ ವ್ಯವಸ್ಥೆಯನ್ನು ಎರಡು ಪರೀಕ್ಷೆಗಳಿಗೆ ಸೀಮಿತಗೊಳಿಸಲಾಗಿದೆ ಎಂದು ತಿಳಿಸಿದರು.

ಇಲಾಖೆಯ ವಿವಿಧ ಸುಧಾರಣಾ ಕ್ರಮಗಳ ಫಲವಾಗಿ 2026ರ SSLC ಪರೀಕ್ಷೆಯಲ್ಲಿ ಶೇ.98.08ರಷ್ಟು ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92.25ರಷ್ಟು ತೇರ್ಗಡೆ ಪ್ರಮಾಣ ದಾಖಲಾಗಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದ್ದು, ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಬದ್ಧತೆ ಮತ್ತು ಇಲಾಖೆಯ ಪ್ರಯತ್ನಗಳಿಗೆ ದೊರೆತ ಫಲಿತಾಂಶವಾಗಿದೆ ಎಂದು ಮಧು ಬಂಗಾರಪ್ಪ ಸಂತಸ ವ್ಯಕ್ತಪಡಿಸಿದರು.

KPS ಶಾಲೆಗಳ ಅಭಿವೃದ್ಧಿಗೆ ವಿಶೇಷ ಒತ್ತು

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಪರಿಕಲ್ಪನೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಈ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಉಚಿತ ಶಿಕ್ಷಣ ಒದಗಿಸುವ ಗುರಿ ಹೊಂದಲಾಗಿದೆ.

KPS ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಬೋಧನೆ, ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ, ಆಧುನಿಕ ಸ್ಮಾರ್ಟ್ ತರಗತಿಗಳು ಹಾಗೂ ಉಚಿತ ಶಾಲಾ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

18 ಸಾವಿರ ಸರ್ಕಾರಿ ಶಿಕ್ಷಕರ ನೇಮಕಾತಿಗೆ ಕ್ರಮ

ಶಿಕ್ಷಣ ವ್ಯವಸ್ಥೆಯ ನಿಜವಾದ ಶಕ್ತಿ ಶಿಕ್ಷಕರು. ಸಮರ್ಥ ಶಿಕ್ಷಕರಿಲ್ಲದೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಮುಂದಿನ ಶೈಕ್ಷಣಿಕ ವರ್ಷದೊಳಗೆ 18,000 ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಇದರ ಜತೆಗೆ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ 43,553 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದರಿಂದ ಶಿಕ್ಷಕರ ಕೊರತೆಯಿಂದ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದರು.

Kalahamsa Infotech private limited‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಅಭಿಯಾನಕ್ಕೆ ಕರೆ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸರ್ಕಾರದ ಪ್ರಯತ್ನಗಳೊಂದೇ ಸಾಕಾಗುವುದಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಉದ್ಯಮಗಳು, ಕಾರ್ಪೊರೇಟ್ ಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ CSR ಪಾಲುದಾರರ ಸಹಕಾರವೂ ಅಗತ್ಯವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೆಗಳು ಮತ್ತು CSR ಪಾಲುದಾರರು ಯಾವ ರೀತಿಯಲ್ಲಿ ಸಹಕರಿಸಬಹುದು ಎಂಬುದನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಸರ್ಕಾರವು ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಮಾರ್ಗಸೂಚಿಗಳನ್ನು ಹೊರಡಿಸಿದೆ.

Also Read>> ಸೊರಬದಲ್ಲಿ ಕುರಿ ಶೆಡ್‌ಗೆ ಬೆಂಕಿ: 150 ಕುರಿ, 100ಕ್ಕೂ ಹೆಚ್ಚು ಕೋಳಿಗಳು ಸಜೀವ ದಹನ

‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಎಂಬ ಪರಿಕಲ್ಪನೆಯಡಿ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ, ಕಲಿಕಾ ಸೌಲಭ್ಯಗಳು ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಬಲಪಡಿಸಲು ಎಲ್ಲರೂ ಕೈಜೋಡಿಸಬೇಕು. CSR ಪಾಲುದಾರರು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ಉಪಸಭಾಪತಿ ಮಂಕಾಳ್ ವೈದ್ಯ, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರ ಜಿ.ಸಿ. ಚಂದ್ರಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಶಾಲಾ ಶಿಕ್ಷಣ ಆಯುಕ್ತೆ ಕೆ. ವಿದ್ಯಾಕುಮಾರಿ ಸೇರಿದಂತೆ ಹಿರಿಯ ಅಧಿಕಾರಿಗಳು, ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalpa News Advertising Disclaimer

Tags: CSRGovernment SchoolMLA Madhu Bangarappaಸಚಿವ ಮಧು ಬಂಗಾರಪ್ಪಸರ್ಕಾರಿ ಶಾಲೆ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬದಲ್ಲಿ ಕುರಿ ಶೆಡ್‌ಗೆ ಬೆಂಕಿ: 150 ಕುರಿ, 100ಕ್ಕೂ ಹೆಚ್ಚು ಕೋಳಿಗಳು ಸಜೀವ ದಹನ

Next Post

ಭಾರತದಲ್ಲಿ ಬಡತನಕ್ಕೆ ಬ್ರೇಕ್! 49 ಕೋಟಿ ಜನರಿಗೆ ಮುಕ್ತಿ! ವಿಶ್ವಬ್ಯಾಂಕ್ ವರದಿಯಲ್ಲಿ ಐತಿಹಾಸಿಕ ಸಾಧನೆ!

kalpa News

kalpa News

Next Post
ಭಾರತದಲ್ಲಿ ಬಡತನಕ್ಕೆ ಬ್ರೇಕ್! 49 ಕೋಟಿ ಜನರಿಗೆ ಮುಕ್ತಿ! ವಿಶ್ವಬ್ಯಾಂಕ್ ವರದಿಯಲ್ಲಿ ಐತಿಹಾಸಿಕ ಸಾಧನೆ!

ಭಾರತದಲ್ಲಿ ಬಡತನಕ್ಕೆ ಬ್ರೇಕ್! 49 ಕೋಟಿ ಜನರಿಗೆ ಮುಕ್ತಿ! ವಿಶ್ವಬ್ಯಾಂಕ್ ವರದಿಯಲ್ಲಿ ಐತಿಹಾಸಿಕ ಸಾಧನೆ!

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL