ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದಾದ್ಯಂತ ಈ ಬಾರಿಯ ಅದ್ದೂರಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ಹಲವು ಕಡೆಗಳಲ್ಲಿ ವಿನಾಯಕನನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
ಪ್ರಮುಖವಾಗಿ ಪ್ರತಿಷ್ಠಿತ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ 50ನೆಯ ವರ್ಷದ ಗಣೇಶೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ ಗಣೇಶನನ್ನು ಮೆರವಣಿಗೆ ಮೂಲಕ ತಂದು ಪ್ರತಿಷ್ಠಾಪನೆ ಮಾಡಲಾಗುತ್ತದೆ.
ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ರಂಗಪ್ಪ ವೃತ್ತದಲ್ಲಿ ವಿಶೇಷವಾಗಿ 50 ಅಡಿ ಎತ್ತರದ ಶ್ರೀ ಆಂಜನೇಯ ಸ್ವಾಮಿಯ ದ್ವಾರ ಬಾಗಿಲು ನಿರ್ಮಿಸಲಾಗಿದೆ.
ನಗರದ ರಂಗಪ್ಪ ವೃತ್ತದ ಹೊಸಮನೆ ಮುಖ್ಯ ರಸ್ತೆಯಲ್ಲಿ ಈ ದ್ವಾರ ಬಾಗಿಲು ನಿರ್ಮಿಸಲಾಗಿದ್ದು, ಆಕರ್ಷಕವಾಗಿ ಕಂಡು ಕಂಡು ಬರುತ್ತಿದೆ. ವೀರ ವಿನಾಯಕ ದಾಮೋದರ ಸಾವರ್ಕರ್, ಛತ್ರಪತಿ ಶಿವಾಜಿ ಮಹಾರಾಜ್, ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗು ಲೋಕಮಾನ್ಯ ಬಾಲಗಂಗಾಧರನಾಥ ತಿಲಕ್ ಅವರ ಭಾವಚಿತ್ರಗಳು ಸಹ ರಾರಾಜಿಸುತ್ತಿವೆ.
ಇದೆ ರೀತಿ ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ.
9 ದಿನಗಳವರೆಗೆ ಪ್ರತಿಷ್ಠಾಪನೆ: ಸಡಗರ ಸಂಭ್ರಮದ ಆಚರಣೆ
ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಈ ಬಾರಿ ಇಂದು ಸಂಜೆ ನಡೆಯಲಿದ್ದು, ಸೆ.8ರಂದು ವಿಸರ್ಜನೆ ನಡೆಯಲಿದೆ. 9 ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. 50ನೇ ವರ್ಷದ ಅಂಗವಾಗಿ ಪ್ರತಿ ದಿನ ಸಂಜೆ 6.30ರಿಂದ ವಿಶೇಷ ಕಾರ್ಯಕ್ರಮಗಳು ಜರುಗಲಿವೆ.
ಸೆ.1ರಂದು ಕಾರ್ಯಕ್ರಮಗಳಸುವರ್ಣ ಸಂಭ್ರಮದ ಹಿಂದೂ ಜಾಗೃತಿ ಸಭೆ ನಡೆಯಲಿದ್ದು, ಹಿಂದು ವಾಗ್ಮಿ ಚೈತ್ರ ಕುಂದಾಪುರ ಹಾಗೂ ಬಾಲವಾಗ್ಮಿ ಹರಿಕಾ ಮಂಜುನಾಥ್, ಸೆ.2ರಂದು ಬಿಗ್ಬಾಸ್ ಖ್ಯಾತಿಯ ರಾಜ್ಯ ಸರ್ಕಾರದ ಪ್ರಶಸ್ತಿ ಪುರಸ್ಕೃತೆ ಮೈಸೂರಿನ ಪ್ರಥಮ ಮಹಿಳಾ ಕಲಾವಿದೆ ಸುಮರಾಜ್ ಕುಮಾರ್ ಅವರಿಂದ ಹಾಸ್ಯಮಯ ಜಾದು ಹಾಗು ಮಾತನಾಡುವ ಗೊಂಬೆ ಪ್ರದರ್ಶನ ನಡೆಯಲಿದೆ. ಸೆ.3ರಂದು ಚರಣ್ ಸಂಗೀತ ಆರ್ಕೆಸ್ಟಾç, ಸೆ.4ರಂದು ಸುಧಾ ಬರಗೂರು ಮತ್ತು ತಂಡದಿಂದ ನಗೆ ಹಬ್ಬ, ಸೆ.5 ರಂದು ಕಾಮಿಡಿ ಕಿಲಾಡಿಗಳು ಕೆ.ಆರ್. ಪೇಟೆ ಶಿವರಾಜ್ ಮತ್ತು ನಯನ ತಂಡದವರಿAದ ಹಾಸ್ಯ ಸಂಜೆ ಮತ್ತು ಸೆ.6ರಂದು ಜೀ ಟಿವಿ ಖ್ಯಾತಿಯ ಮಂಗಳೂರಿನ ರಾಜ್ಶೆಟ್ಟಿ ನೃತ್ಯ ತಂಡದವರಿಂದ ಡ್ಯಾನ್ಸ್ ನೈಟ್ ಹಾಗು ಸೆ.7ರಂದು ಬೆಳಿಗ್ಗೆ 9 ಗಂಟೆಗೆ ಗಣಹೋಮ ಮತ್ತು ಸಮುದಾಯ ಭವನ ಲೋಕಾರ್ಪಣೆ, ಅನ್ನಸಂತರ್ಪಣೆ ನಂತರ ಹಿಂದೂ ಧಾರ್ಮಿಕ ಸಭೆ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post