ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಜಮ್ಮು ಕಾಶ್ಮೀರದ ಪೂಂಚ್’ನಲ್ಲಿ ಇಂದು ಮಧ್ಯಾಹ್ನ ಸೇನಾ ವಾಹನದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಸೇನಾ ವಾಹನ ಹೊತ್ತಿ ಉರಿದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದಾರೆ.
ರಾಜೌರಿ ಸೆಕ್ಟರ್’ನ ಭಿಂಬರ್ ಗಲಿ ಮತ್ತು ಪೂಂಚ್ ನಡುವೆ ಚಲಿಸುತ್ತಿದ್ದ ಒಂದು ಸೇನಾ ವಾಹನವನ್ನು ಅಪರಿಚಿತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ.
ಭಾರೀ ಮಳೆ ಮತ್ತು ಪ್ರದೇಶ ಸರಿಯಾಗಿ ಕಾಣದ ಪರಿಸ್ಥಿತಿಯ ಲಾಭ ಪಡೆದ ಉಗ್ರರು, ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಇದರಿಂದಾಗಿ ವಾಹನಕ್ಕೆ ಬೆಂಕಿ ಹೊತ್ತುಕೊಂಡಿದೆ.
VIDEO | Indian Army vehicle catches fire in Jammu and Kashmir's Poonch sector. More details are awaited. pic.twitter.com/E4gyvthM54
— Press Trust of India (@PTI_News) April 20, 2023
ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಯೋಧನನ್ನು ರಾಜೌರಿಯ ಸೇನಾ ಆಸ್ಪತ್ರೆಗೆ ತಕ್ಷಣವೇ ಸ್ಥಳಾಂತರಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಭಾಗದಲ್ಲಿ ಉಗ್ರರು ಅಡಗಿರುವ ಮಾಹಿತಿಯ ಹಿನ್ನೆಲೆಯಲ್ಲಿ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post