ಶಿವಮೊಗ್ಗ: ಮುಸ್ಲಿಂ ಯುವಕ ಹಿಂದೂ ಯುವತಿಯ ಕೈ ಹಿಡಿದು ಎಳೆದಾಡಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಎರಡು ಕೋಮಿನ ನಡುವೆ ಗುಂಪು ಘರ್ಷಣೆ ನಡೆದು, ಲಾಠಿ ಪ್ರಹಾರ ನಡೆಸಿರುವ ಘಟನೆ ಇಂದು ರಾತ್ರಿ ನಡೆದಿದೆ.
ಇಲ್ಲಿನ ಗಾಂಧೀ ಬಜಾರ್‌ನ ಕಸ್ತೂರಬಾ ರಸ್ತೆಯಲ್ಲಿ ಚಪ್ಪಲಿ ಕೊಳ್ಳಲು ಯುವತಿ ತೆರಳಿದ್ದ ವೇಳೆ ಯುವಕ ಕೈ ಹಿಡಿದು ಎಳೆದಾಡಿದ ಎಂದು ಆರೋಪ ಮಾಡಲಾಗಿದ್ದು, ಪರಿಣಾಮ ಎರಡೂ ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಆದರೆ, ವಿಷಯ ತಿಳಿದು ತತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದ್ದಾರೆ.
ಘರ್ಷಣೆ ವೇಳೆ ಬಜರಂಗ ದಳದ ಕಾರ್ಯಕರ್ತ ಮಾಲತೇಶ್ ಎನ್ನುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆ ದಾಖಲಿಸಲಾಗಿದೆ ಎನ್ನಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠ ಅಭಿನವ್ ಖರೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಹಳೇ ಶಿವಮೊಗ್ಗ ಭಾಗದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತರಕ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ.
ಈಗಾಗಲೇ ಗಾಂಧಿ ಬಜಾರ್ ಸೇರಿದಂತೆ ಹಳೇ ಶಿವಮೊಗ್ಗ ಭಾಗದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ತುರ್ತು ಪಥಸಂಚಲನ ನಡೆಸಿ, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ.
Discussion about this post