ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜವಳಿ ಮೇಲಿನ ಜಿಎಸ್’ಟಿಯನ್ನು ಏರಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಡಿ.16ರ ನಾಳೆ ನಗರದ ಬಟ್ಟೆ ಅಂಗಡಿಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಜವಳಿ ವರ್ತಕರ ಸಂಘದ ಅಧ್ಯಕ್ಷ ವೆಂಕಟೇಶ ಮೂರ್ತಿ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜವಳಿ ಮೇಲಿನ ಜಿಎಸ್’ಟಿಯನ್ನು ಶೇ.5ರಿಂದ 12ಕ್ಕೆ ಏರಿಕೆ ಮಾಡಲಾಗುತ್ತಿದೆ. ಆಹಾರದಂತೆಯೇ ಬಟ್ಟೆಯೂ ಸಹ ಜನರು ಮೂಲಭೂತ ಅಗತ್ಯವಾಗಿದೆ. ಇದರ ಮೇಲಿನ ತೆರಿಗೆಯನ್ನು ಹೆಚ್ಚು ಮಾಡುವುದರಿಂದ ಜವಳಿ ವ್ಯಾಪಾರಿಗಳಿಗೆ ಮಾತ್ರವಲ್ಲ, ಗ್ರಾಹಕರಿಗೂ ಸಹ ಹೊರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ತೆರಿಗೆ ಏರಿಕೆ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದರು.
ನಾಳೆ ಮಧ್ಯಾಹ್ನ 2 ಗಂಟೆಯವರೆಗೂ ಬಟ್ಟೆ ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತದೆ. ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















