ಕಲ್ಪ ಮೀಡಿಯಾ ಹೌಸ್ | ಶಿಮ್ಲಾ |
ಕರ್ನಾಟಕದಂತೆಯೇ ಹಲವು ಗ್ಯಾರೆಂಟಿಗಳನ್ನು ನೀಡಿದ್ದ ಹಿಮಾಚಲ ಪ್ರದೇಶ ಸರ್ಕಾರದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ನೀಡಲಾಗಿದ್ದ ವಿದ್ಯುತ್ ಸಬ್ಸಿಡಿಯಿಂದ ಹಿಂದೆ ಸರಿಯಿವಂತೆ ಅಲ್ಲಿನ ಸಿಎಂ ಸುಕ್ವಿಂದರ್ ಸಿಂಗ್ ಸುಖು ಕರೆ ನೀಡಿದ್ದಾರೆ.
ಅಲ್ಲಿನ ಸರ್ಕಾರ ನೀಡಿದ್ದ ಗ್ಯಾರೆಂಟಿಗಳನ್ನು ವಾಪಾಸ್ ಪಡೆಯುವ ಅಭಿಯಾನ ಆರಂಭವಾಗಿದ್ದು, ಜನರಿಂದ ಆಕ್ರೋಶ ವ್ಯಕ್ತವಾಗಿದೆ.
Also Read>> ಮಂತ್ರಾಲಯ | ರಾಯರ ಸನ್ನಿಧಿಯಲ್ಲಿ ಬೆಂಗಳೂರಿನ ಗಾಯಕಿ ರಚನಾ ಅವರ ಗಾನಸೇವೆ
ಸಿಎಂ ಸುಖು ಅವರು ತಮ್ಮ ಹೆಸರಿನಲ್ಲಿ ನೋಂದಣಿಯಾಗಿದ್ದ 5 ವಿದ್ಯುತ್ ಸಂಪರ್ಕಗಳಿಗೆ ಸಿಗುತ್ತಿದ್ದ ಸಬ್ಸಿಡಿಯನ್ನು ಹಿಂದಿರುಗಿಸಿದ್ದಾರೆ.
ಅಲ್ಲದೇ, ಬಹುವಿದ್ಯುತ್ ಸಂಪರ್ಕವನ್ನು ಹೊಂದಿರುವ ಜನರು, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಬ್ಸಿಡಿಯನ್ನು ವಾಪಸ್ ನೀಡುವಂತೆ ರಾಜ್ಯದ ಜನತೆಯನ್ನು ಕೋರಿದ್ದಾರೆ.
ಸರ್ಕಾರ ವಿದ್ಯುತ್ ಸಬ್ಸಿಡಿಗಾಗಿ ವಾರ್ಷಿಕ 2,200 ಕೋಟಿ ರೂ. ಖರ್ಚು ಮಾಡುತ್ತದೆ. ವಿದ್ಯುತ್ ಇಲಾಖೆಯ ನೌಕರರ ಸಂಬಳ ಮತ್ತು ಪಿಂಚಣಿಗಾಗಿ ತಿಂಗಳಿಗೆ 200 ಕೋಟಿ ರೂ. ಖರ್ಚು ಮಾಡುತ್ತಿದೆ. ಸಬ್ಸಿಡಿ ಅಗತ್ಯ ಇರುವವರಿಗೆ ಮೀಸಲು. ಅನುಕೂಲಸ್ಥರು ರಾಜ್ಯದ ಅಭಿವೃದ್ಧಿ ಕಾರಣಕ್ಕೆ ವಾಪಸ್ ನೀಡಬೇಕು ಎಂದು ಸಿಎಂ ಸುಖು ಕರೆ ನೀಡಿದ್ದಾರೆ.
ಆರ್ಥಿಕ ಸಂಕಷ್ಟದಲ್ಲಿರುವ ಹಿಮಾಚಲ ಪ್ರದೇಶ ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸಲು ಈಗಾಗಲೇ ರಾಜ್ಯದಲ್ಲಿ ಹಲವು ವೆಚ್ಚಗಳಿಗೆ ಕಡಿವಾಣ ಹಾಕಿತ್ತು. ಸಿಎಂ, ಪಕ್ಷದ ಶಾಸಕರು, ಉನ್ನತ ಅಧಿಕಾರಿಗಳ ವೇತನ ಪಾವತಿಯಲ್ಲಿ ವಿಳಂಬವಾಗಿತ್ತು. ಅಲ್ಲದೇ ಕೆಲ ಸರ್ಕಾರಿ ಹೋಟೆಲ್’ಗಳನ್ನು ಕೂಡ ಮಾರಾಟ ಮಾಡಲಾಗಿತ್ತು. ಅನರ್ಹ ಶಾಸಕರಿಗೆ ಪಿಂಚಣಿ ನಿಲ್ಲಿಸುವ ನಿರ್ಧಾರ ಪ್ರಕಟಿಸಿತ್ತು. ಉದ್ಯಮ, ಹೋಟೆಲ್’ಗಳಿಗೆ ನೀಡುವ ವಿದ್ಯುತ್ ಸಬ್ಸಿಡಿ ಕಡಿತ ಮಾಡಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post