ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕಲಬುರಗಿ: ಮಹತ್ವದ ನಿರ್ಧಾರವೊಂದರಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥ ಶ್ರೀಗಳಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.
ಈ ಕುರಿತಂತೆ ವಿವಿ ಅಧಿಕೃತ ಘೋಷಣೆ ಮಾಡಿದ್ದು, ನ.20 ರಂದು ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ನಡೆಯಲಿದೆ.
ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಲು ವಿಶ್ವವಿದ್ಯಾಲಯ ಸಿಂಡಿಕೇಟ್ ಮೂಲಕ 10 ಜನರ ಹೆಸರು ಶಿಫಾರಸು ಮಾಡಲಾಗಿತ್ತು. ಶೋಧನಾ ಸಮಿತಿ 10ರಲ್ಲಿ ಮೂವರ ಹೆಸರು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದೀಗ ರಾಜ್ಯಪಾಲರು ಮಂತ್ರಾಲಯ ಶ್ರೀಗಳ ಹೆಸರು ಅಂತಿಮಗೊಳಿಸಿ ಹಸಿರು ನಿಶಾನೆ ತೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post