ಕಲ್ಪ ಮೀಡಿಯಾ ಹೌಸ್ | ಗುಂಡ್ಲುಪೇಟೆ |
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅವರುಗಳ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಗಳನ್ನು ಮನೆಮನೆಗೂ ಕಾರ್ಯಕರ್ತರು ತಲುಪಿಸಬೇಕು ಎಂದು ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಕರೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದ ವಿಜಯ ಸಂಕಲ್ಪ ಅಭಿಯಾನದಲ್ಲಿ ಅವರು ಮಾತನಾಡಿದರು.
ಕಳೆದ 8 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಾಲು ಸಾಲು ಜನಪರ ಯೋಜನೆಗಳು ಕಾರ್ಯಗತಗೊಂಡಿದ್ದು, ಇದರಿಂದ ಕೋಟ್ಯಂತರ ಭಾರತೀಯರಿಗೆ ಇದು ಸಹಕಾರಿಯಾಗಿದೆ. ಅಲ್ಲದೇ, ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿಯೂ ಸಹ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇವುಗಳನ್ನೆಲ್ಲಾ ಮನೆ ಮನೆಗೂ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದರು.
ವಾರ್ಡ್’ನ ಮನೆಮನೆಗೆ ತೆರಳಿ ಕರಪತ್ರಗಳನ್ನ ಹಂಚಿ ಕಾರ್ಯಕರ್ತರ ಮನೆಯ ಮೇಲೆ ಪಕ್ಷದ ಧ್ವಜಗಳನ್ನು ಹಾಕಲಾಯಿತು
(ವಿಶೇಷ ವರದಿ: ಪುನೀತ್ ಜಿ. ಕೂಡ್ಲೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post