ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೀವನವನ್ನು ಆಧರಿಸಿ ಬರೆದಿರುವ ಪುಸ್ತಕದ ಕನ್ನಡ ಅವತರಣಿಕೆ ಪುಸ್ತಕ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.
ಬಿಜೆಪಿ ಮುಖಂಡ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಅಕಾಂಕ್ಷಿ, ಶಿಕ್ಷಣ ತಜ್ಞ ಡಾ. ಹೆಚ್.ಎಂ. ಚಂದ್ರಶೇಖರ್ ಅವರು ಈ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
ಈ ವಿಚಾರ ಕುರಿತಂತೆ ಪಕ್ಷದ ಹಿರಿಯ ನಾಯಕ, ಮಾಜಿ ಡಿಸಿಎಂ ಆರ್. ಅಶೋಕ್ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದರು.
ಉತ್ತರ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಚಂದ್ರಶೇಖರ್ ಅವರು ಕನ್ನಡಕ್ಕೆ ಅನುವಾದಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಜೀವನಾಧಾರಿತ ಪುಸ್ತಕ “ಮೋದಿ ಮೆಚ್ಚಿದ ಯೋಗಿ” ಪುಸ್ತಕ ಬಿಡುಗಡೆ ಸಂಬಂಧ ಮಾತುಕತೆ ನಡೆಸಿದರು.
Discussion about this post